ಶಿರಾಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಕಾರು ನಡುವೆ ಢಿಕ್ಕಿ ➤ ಅಪಾಯದಿಂದ ಪಾರಾದ ಪ್ರಯಾಣಿಕರು

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಆ.31. ಕೆಎಸ್ಸಾರ್ಟಿಸಿ ಬಸ್ ಹಾಗೂ ಟೊಯೋಟಾ ಎಟಿಯೋಸ್ ಕಾರು ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಕಾರಿನಲ್ಲಿದ್ದ ಪ್ರಯಾಣಿಕರು ಗಾಯಗೊಂಡ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಸಮೀಪ ಶನಿವಾರದಂದು ಸಂಭವಿಸಿದೆ.

ಹುಬ್ಬಳ್ಳಿಯಿಂದ ಶಿವಮೊಗ್ಗ ಮಾರ್ಗವಾಗಿ ಧರ್ಮಸ್ಥಳಕ್ಕೆ ಆಗಮಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸು ಹಾಗೂ ಬೆಂಗಳೂರು ಕಡೆಗೆ ತೆರಳುತ್ತಿದ್ದ ಕಾರಿನ ನಡುವೆ ಶಿರಾಡಿ ಸಮೀಪ ಢಿಕ್ಕಿ ಸಂಭವಿಸಿದೆ. ಪರಿಣಾಮ ಕಾರಿನಲ್ಲಿದ್ದ ಪ್ರಯಾಣಿಕರು ಸಣ್ಣ-ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Also Read  ದ.ಕ. ಜಿಲ್ಲಾ ಶಾಖೆಯಿಂದ ವಿವಿಧ ಬೇಡಿಕೆ ಈಡೇರಿಸುವಂತೆ ಮನವಿ

 

error: Content is protected !!
Scroll to Top