ಧರ್ಮಸ್ಥಳ: ಕೆಎಸ್ಸಾರ್ಟಿಸಿ ಬಸ್ – ಬೈಕ್ ಢಿಕ್ಕಿ ➤ ಸವಾರ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಧರ್ಮಸ್ಥಳ, ಆ.31. ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್‌ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಧರ್ಮಸ್ಥಳ ಸಮೀಪದ ನಿಡ್ಲೆ ಎಂಬಲ್ಲಿ ಶನಿವಾರ ಸಂಜೆ ಸಂಭವಿಸಿದೆ.

ಮೃತ ಸವಾರನನ್ನು ಬೆಂಗಳೂರಿನ ರಾಜಾಜಿನಗರ ನಿವಾಸಿ ರೋಹಿತ್ ಎಂದು ಗುರುತಿಸಲಾಗಿದೆ. ರೋಹಿತ್ ತನ್ನ ಹೀರೋ ಸಿಡಿ ಡಿಲಕ್ಸ್ ಬೈಕಿನಲ್ಲಿ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಆಗಮಿಸುತ್ತಿದ್ದ ವೇಳೆ ನಿಡ್ಲೆ ಸಮೀಪದ ಕರಿಜೆ ಎಂಬಲ್ಲಿ ಬೈಕ್ ಹಾಗೂ ಬಸ್ ನಡುವೆ ಢಿಕ್ಕಿ ಸಂಭವಿಸಿದ್ದು, ಪರಿಣಾಮ ರಸ್ತೆಗೆಸೆಯಲ್ಪಟ್ಟ ರೋಹಿತ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ‌. ಸ್ಥಳಕ್ಕೆ ಧರ್ಮಸ್ಥಳ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Gems

Scroll to Top