ಪಿಎಫ್ಐ ನಾಯಕರಿಂದ ಶರತ್ ಹತ್ಯೆ: ಹರಿಶೇಖರನ್ ► ಪ್ರಮುಖ ಆರೋಪಿಗಳಿಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.15. ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ ಕೊಲೆ ಪ್ರಕರಣವನ್ನು ಬೇಧಿಸಿದ ಪೊಲೀಸರು ಚಾಮರಾಜನಗರದ ಪಿಎಫ್ಐ ನಾಯಕನ ಸಹಿತ ಇಬ್ಬರನ್ನು ಬಂಧಿಸಲಾಗಿದೆ ಎಂದು ಪಶ್ಚಿಮ ವಲಯ ಐಜಿಪಿ  ಹರಿಶೇಖರನ್ ಮಂಗಳವಾರದಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಐಜಿಪಿ ಕಛೇರಿಯಲ್ಲಿ ಮಂಗಳವಾರ ಸಂಜೆ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳದ ಸಜಿಪ ಮುನ್ನೂರು ಗ್ರಾಮದ ಹಾಲಾಡಿ ಇಂದಿರಾ ನಗರ ನಿವಾಸಿ ಅಬ್ದುಲ್ ಶಾಫಿ(36) ಮತ್ತು ಚಾಮರಾಜನಗರದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯ ಅಧ್ಯಕ್ಷ ಖಲೀಲುಲ್ಲಾ(30) ಎಂಬವರನ್ನು ಬಂಧಿಸಲಾಗಿದೆ. ಪ್ರಕರಣದ ತನಿಖೆಗಾಗಿ ಒಟ್ಟು ಏಳು ತಂಡಗಳನ್ನು ರಚಿಸಿ ಆರೋಪಿಗಳ ಜಾಡನ್ನು ಪತ್ತೆಹಚ್ಚಲಾಗಿದೆ. ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿರುವ ಇತರ ಆರೋಪಿಗಳ ಸುಳಿವು ದೊರೆತಿದ್ದು, ಶೀಘ್ರದಲ್ಲಿಯೇ ಬಂಧಿಸಲಾಗುವುದೆಂದರು. ಆರೋಪಿಗಳನ್ನು ಪತ್ತೆಹಚ್ಚಿದ ತಂಡಕ್ಕೆ 25 ಸಾವಿರ ರೂ.ಗಳನ್ನು ಬಹುಮಾನವಾಗಿ ಘೋಷಿಸಿದ್ದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಧೀರ್ ಕುಮಾರ್ ರೆಡ್ಡಿಯವರಿಗೆ ಹಸ್ತಾಂತರಿಸಿದರು.

Also Read  ಮಂಗಳೂರು:ನೀರು ಪಾಲಾದ ಯುವಕ ► ಕೊಲೆ ಶಂಕೆ

ಆರೆಸ್ಸೆಸ್ ಕಾರ್ಯಕರ್ತ ಶರತ್ ಹತ್ಯೆ ಆರೋಪಿಗಳ ಬಂಧನ  ► ಕೊನೆಗೂ ಪ್ರಕರಣ ಬೇಧಿಸಿದ ಜಿಲ್ಲಾ ಪೊಲೀಸರು
http://goo.gl/ShsrZS

error: Content is protected !!
Scroll to Top