ಮರ್ಧಾಳ: ಕ್ಯಾನ್ಸರ್ ಗೆ ತುತ್ತಾಗಿದ್ದ ಬಾಲಕ ವಿಧಿವಶ

(ನ್ಯೂಸ್ ಕಡಬ) newskadaba.com ಕಡಬ, ಸೆ.01. ಅಸೌಖ್ಯದಿಂದ ಬಳಲುತ್ತಿದ್ದ ಕಡಬದ ಬಾಲಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಭಾನುವಾರದಂದು ಮೃತಪಟ್ಟಿದ್ದಾನೆ.

ಮೃತ ಬಾಲಕನನ್ನು ಕಡಬ ತಾಲೂಕು ಬಂಟ್ರ ಗ್ರಾಮದ ಕಂಪ ನಿವಾಸಿ ಸುರೇಶ್ ಗೌಡ ಹಾಗೂ ಲಲಿತಾ ದಂಪತಿಯ ಪ್ರಥಮ ಪುತ್ರ ರಾಜೇಶ್ ಎಂದು ಗುರುತಿಸಲಾಗಿದೆ. ಕಳೆದ ಸುಮಾರು ನಾಲ್ಕು ವರ್ಷಗಳಿಂದ ರಕ್ತದ ಕ್ಯಾನ್ಸರ್ ಗೆ ತುತ್ತಾಗಿದ್ದ ರಾಜೇಶ್ ನಿಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಕಳೆದ ನಾಲ್ಕು ದಿನಗಳಿಂದ ತೀರಾ ಅನಾರೋಗ್ಯಕ್ಕೊಳಗಾಗಿದ್ದ ರಾಜೇಶ್ ನನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಭಾನುವಾರದಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.

Scroll to Top