ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಆಲ್ಟೋ ಕಾರು ➤ ಮೃತಪಟ್ಟ ನಾಲ್ವರ ಗುರುತು ಪತ್ತೆ



(ನ್ಯೂಸ್ ಕಡಬ) newskadaba.com ಪುತ್ತೂರು, ಸೆ.02. ಗಣೇಶ ಚತುರ್ಥಿ ಹಬ್ಬದ ಸಂಭ್ರಮದಲ್ಲಿದ್ದ ಕುಟುಂಬವೊಂದು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಅರಿಯಡ್ಕ ಗ್ರಾಮದ ಮಡ್ಯಂಗಳ ಎಂಬಲ್ಲಿ ಕೆರೆಗೆ ಬಿದ್ದು ಮೃತಪಟ್ಟ ಕರುಣಾಜನಕ ಘಟನೆ ಸೋಮವಾರ ಬೆಳಿಗ್ಗೆ ನಡೆದಿದ್ದು, ಮೃತರ ಗುರುತು ಪತ್ತೆಯಾಗಿದೆ.





ಸುಳ್ಯ ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ KA.05.MF.9794 ನೋಂದಣಿ ಸಂಖ್ಯೆಯ ಮಾರುತಿ ಆಲ್ಟೋ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಬದಿಯಲ್ಲಿದ್ದ ಕೆರೆಗೆ ಬಿದ್ದಿದ್ದು, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಶುಂಠಿಕೊಪ್ಪ ಮೂಲದ ಅಶೋಕ್(48), ಪತ್ನಿ ಹೇಮಲತಾ, ಪುತ್ರ ಯಶಸ್ ಹಾಗೂ ಪುತ್ರಿ ವರ್ಷ ಎಂಬವರುಗಳು ಮೃತಪಟ್ಟಿರುತ್ತಾರೆ. ಮೃತದೇಹವನ್ನು ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳು ಆಗಮಿಸಿ ನೀರಿನಿಂದ ಮೇಲೆತ್ತಿದ್ದು, ಪುತ್ತೂರು ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.






 

error: Content is protected !!
Scroll to Top