ಕರಾವಳಿಯಾದ್ಯಂತ ಭಾರೀ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆಯಿಂದ ಎಚ್ಚರಿಕೆ ➤ ಮುಂದಿನ ನಾಲ್ಕು ದಿನಗಳ ಕಾಲ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರೆಂಜ್ ಅಲೆರ್ಟ್ ಘೋಷಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.02. ರಾಜ್ಯದ ಕರಾವಳಿ ಪ್ರದೇಶದಲ್ಲಿ ಮುಂದಿನ ಕೆಲವು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ನಾಲ್ಕು ದಿನಗಳವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್, ಕರಾವಳಿ ಪ್ರದೇಶದಲ್ಲಿ ಕಳೆದ ಹಲವು ದಿನಗಳಿಂದ ಸುರಿಯುತ್ತಿದ್ದ ಮಳೆಯು ಸ್ವಲ್ಪ ಬಿಡುವು ನೀಡಿತ್ತಾದರೂ, ಇದೀಗ ಮತ್ತೆ ಬಿರುಸನ್ನು ಪಡೆದುಕೊಂಡಿದೆ. ಮುಂದಿನ ಕೆಲವು ದಿನಗಳ ಕಾಲ ಭಾರೀ ಮಳೆ ಬೀಳುವ ಸಂಭವವಿದ್ದು, ಭಾರತೀಯ ಹವಾಮಾನ ಇಲಾಖೆ ವರದಿಯ ಅನುಸಾರ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಾಲ್ಕು ದಿನಗಳ ಕಾಲ ಆರೆಂಜ್ ಅಲೆರ್ಟ್ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ತಿಳಿಸಿದ್ದಾರೆ.

Also Read  ದೇಶದ ಅತೀ ದೊಡ್ಡ ಕೋವಿಡ್ ಕೇರ್​ ಸೆಂಟರ್​ ಸೋಮವಾರದಿಂದ ಆರಂಭ ➤ BBMP ಆಯುಕ್ತ ಮಂಜುನಾಥ್ ಪ್ರಸಾದ್

error: Content is protected !!
Scroll to Top