(ನ್ಯೂಸ್ ಕಡಬ) newskadaba.com ಮಂಗಳೂರು, ಸಪ್ಟೆಂಬರ್.3.ಕರ್ನಾಟಕ ಸರ್ಕಾರ, ದಕ್ಷಿಣ ಕನ್ನಡ ಜಿಲ್ಲಾಪಂಚಾಯತ್, ಆಯುಷ್ ಇಲಾಖೆ ಹಾಗೂ ಶ್ರೀರಾಮಾಶ್ರಮ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಶ್ರೀರಾಮಾಶ್ರಮ ಅನುದಾನರಹಿತ ಆಂಗ್ಲಮಾಧ್ಯಮ ಶಾಲೆ, ಕೊಂಚಾಡಿ, ಮಂಗಳೂರು ಇವರ ಸಹಕಾರದೊಂದಿಗೆ ಉಚಿತ ಆಯುಷ್ ಚಿಕಿತ್ಸಾ ಶಿಬಿರ ಕಾರ್ಯಕ್ರಮವನ್ನು ಏರ್ಪಡಿಸಲಾಯಿತು.
ರಾಷ್ಟ್ರೀಯ ಆಯುಷ್ ಅಭಿಯಾನದಡಿಯಲ್ಲಿ ಆಗಸ್ಟ್ 30 ರಂದು ಶ್ರೀರಾಮಾಶ್ರಮ ವಿದ್ಯಾಸಂಸ್ಥೆ, ಕೊಂಚಾಡಿಯಲ್ಲಿ ಉಚಿತ ಆಯುಷ್ ಚಿಕಿತ್ಸಾ ಶಿಬಿರವು ನಡೆಯಿತು. ಕೊಂಚಾಡಿ ಶ್ರೀರಾಮಾಶ್ರಮ ವಿದ್ಯಾಸಂಸ್ಥೆಯ ಸಂಚಾಲಕರಾದ ಡಾ ಎನ್.ವಿ.ಕಿಶೋರ್, ಶಿಬಿರಕ್ಕೆ ಚಾಲನೆ ನೀಡಿದರು. ಆಯುಷ್ ಚಿಕಿತ್ಸಾ ವಿಧಾನವು ಆರೋಗ್ಯ ಸೇವೆಯಲ್ಲಿ ಸಾಧನೆಯನ್ನು ಮಾಡಿದ್ದು, ಜನರಪ್ರೀತಿ ಹಾಗೂ ನಂಬಿಕೆಯನ್ನು ಉಳಿಸಿಕೊಂಡಿದೆ ಎಂದರು.
ಶ್ರೀರಾಮಾಶ್ರಮ ವಿದ್ಯಾಸಂಸ್ಥೆಯ ಹಳೆವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಉಮೇಶ್ ದಂಡೆಕೇರಿ ಇವರು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಸಂಸ್ಥೆಯ ಶಿಕ್ಷಕ ರಕ್ಷಕ ಸಂಘದ ಮಾಜಿ ಅಧ್ಯಕ್ಷರಾದ ಸದಾನಂದ ಪ್ರಭು. ಕೊಪ್ಪಲಕಾಡು-ಸಂಸ್ಥೆಯ ಕನ್ನಡ ಮಾಧ್ಯಮ ಶಾಲೆಯ ಶಿಕ್ಷಕ ರಕ್ಷಕ ಸಂಘದ ಮಾಜಿ ಅಧ್ಯಕ್ಷರಾದ ಜಯಂತ್, ಇನ್ನಿತರರು ಉಪಸ್ಥಿತರಿದ್ದರು ಎಂದು ಜಿಲ್ಲಾ ಆಯುಷ್ ಅಧಿಕಾರಿ ದಕ್ಷಿಣ ಕನ್ನಡ ಜಿಲ್ಲೆ ಇವರ ಪ್ರಕಟಣೆ ತಿಳಿಸಿದೆ.