➤ ಬ್ರೇಕಿಂಗ್ ನ್ಯೂಸ್ – ಮಾಜಿ ಸಚಿವ, ಕಾಂಗ್ರೆಸ್ ಟ್ರಬಲ್ ಶೂಟರ್ ಡಿಕೆಶಿ ಅರೆಸ್ಟ್

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ.03. ದೆಹಲಿಯ ಫ್ಲ್ಯಾಟ್‍ನಲ್ಲಿ ಪತ್ತೆಯಾದ ಅಕ್ರಮ ಹಣ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಎದುರಿಸುತ್ತಿರುವ ಡಿಕೆ ಶಿವಕುಮಾರ್ ಅವರನ್ನು ಜಾರಿ ನಿರ್ದೇಶನಾಲಯ ನಾಲ್ಕು ದಿವಸಗಳ ವಿಚಾರಣೆಯ ಬಳಿಕ ಮಂಗಳವಾರ ರಾತ್ರಿ ಬಂಧಿಸಿದೆ.

ಮಂಗಳವಾರ ಸಂಜೆ ಈ ಪ್ರಕರಣದ ಸಂಬಂಧ ಮತ್ತಷ್ಟು ವಿಚಾರಣೆ ನಡೆಸುವ ಹಿನ್ನೆಲೆಯಲ್ಲಿ ಶಿವಕುಮಾರ್ ಅವರನ್ನು ಬಂಧಿಸಿರುವ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಇಂದು ರಾತ್ರಿ ಅಥವಾ ನಾಳೆ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಿದ್ದಾರೆ.

ಈ ನಡುವೆ, ನಿರೀಕ್ಷಣಾ ಜಾಮೀನು ಸಲ್ಲಿಸುವ ನಿರ್ಧಾರದಿಂದ ಸದ್ಯಕ್ಕೆ ಡಿಕೆ ಶಿವಕುಮಾರ್ ಹಿಂದೆ ಸರಿದಿದ್ದು, ಡಿಕೆಶಿ ಹೊರತುಪಡಿಸಿ ಉಳಿದವರು, ಸಮನ್ಸ್ ರದ್ದು ಕೋರಿ ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದಾರೆ. ಆದರೆ ತುರ್ತು ವಿಚಾರಣೆಗೆ ಹೈಕೋರ್ಟ್ ನಿರಾಕರಿಸಿದೆ.

Also Read  ಎನ್ಎಂಎಂಎಲ್ ಮರುನಾಮಕರಣ ➤ಪ್ರಧಾನಿ ಮೋದಿ ವಿರುದ್ದ ತರಾಟೆಯೆತ್ತಿದ ಜೈರಾಂ

error: Content is protected !!
Scroll to Top