ಪುತ್ತೂರು: ಚೂರಿಯಿಂದ ಇರಿದು ಹಿಂಜಾವೇ ಮುಖಂಡನ ಬರ್ಬರ ಹತ್ಯೆ ➤ ಪೊಲೀಸ್ ಠಾಣೆಯ ಮುಂಭಾಗದ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಘಟನೆ

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ.04. ಗಣೇಶೋತ್ಸವ ಕಾರ್ಯಕ್ರಮದಲ್ಲಿ ಯುವಕನೋರ್ವನನ್ನು ಚೂರಿಯಿಂದ ಇರಿದು ಬರ್ಬರವಾಗಿ ಹತ್ಯಗೈದ ಘಟನೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ಮುಂಭಾಗದಲ್ಲಿ ಮಂಗಳವಾರ ರಾತ್ರಿ ನಡೆದಿದೆ.

ಮೃತ ಯುವಕನನ್ನು ಪುತ್ತೂರು ತಾಲೂಕು ಹಿಂದೂ ಜಾಗರಣಾ ವೇದಿಕೆಯ ಕಾರ್ಯದರ್ಶಿ ಮೇರ್ಲ ನಿವಾಸಿ ಕಾರ್ತಿಕ್ ಸುವರ್ಣ ಎಂದು ಗುರುತಿಸಲಾಗಿದೆ. ಆರೋಪಿಗಳಾದ ಸಂಪ್ಯದ ಚರಣ್‌ರಾಜ್, ಕಿರಣ್ ಮತ್ತು ಪ್ರೀತೇಶ್ ಸ್ಥಳದಿಂದ ಪರಾರಿಯಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಗಣೇಶೋತ್ಸವ ಕಾರ್ಯಕ್ರಮವನ್ನು ಅರ್ಧಕ್ಕೆ ನಿಲ್ಲಿಸಲಾಗಿದ್ದು, ಸ್ಥಳದಲ್ಲಿ ಕೆಲಕಾಲ ಆತಂಕಕಾರಿ ಸ್ಥಿತಿ ನಿರ್ಮಾಣವಾಗಿತ್ತು. ಕೊಲೆಗೆ ಸ್ಪಷ್ಟ ಕಾರಣ ತಿಳಿದು ಬಂದಿಲ್ಲ.

Also Read  ನಾಡಹಬ್ಬ 'ದಸರಾ' ಆಚರಣೆ ಮೇಲೂ ಕೊರೋನಾ ಕರಿ ನೆರಳು!

Gems

error: Content is protected !!
Scroll to Top