ದ. ಕ ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ ಮಂಗಳೂರು ➤ ಜಿಲ್ಲಾ ಮಟ್ಟದ ಹಾಗೂ ವಲಯ ಮಟ್ಟದ ಶಿಕ್ಷಕರ ದಿನಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸಪ್ಟೆಂಬರ್.5.ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ ಮಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಮತ್ತು ಮಂಗಳೂರು ದಕ್ಷಿಣ ವಲಯ ಶಿಕ್ಷಕರ ದಿನಾಚರಣಾ ಸಮಿತಿ ಕರ್ನಾಟಕ ರಾಜ್ಯ ಕಲ್ಯಾಣ ನಿಧಿ ಹಾಗೂ ಕರ್ನಾಟಕ ರಾಜ್ಯ ವಿದ್ಯಾರ್ಥಿಗಳ ಕ್ಷೇಮಾಭಿವೃದ್ಧಿ ನಿಧಿ ಇವರ ಸಹಯೋಗದಲ್ಲಿ ಇಂದು ಶಿಕ್ಷಕರದಿನಾಚರಣೆಯನ್ನು ಆಚರಿಸಲಾಗುತ್ತಿದೆ.

ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ-2019 ಕಾರ್ಯಕ್ರಮ ಇಂದು ಬೆಳಿಗ್ಗೆ 10 ಗಂಟೆಗೆ ಮಂಗಳೂರು ಪುರಭವನದಲ್ಲಿ ನಡೆಯಲಿದೆ. ಮೀನುಗಾರಿಕೆ ಹಾಗೂ ಬಂದರು ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.ಮಂಗಳೂರು ಉತ್ತರ ವಲಯ ಮಟ್ಟದ ಶಿಕ್ಷಕರ ದಿನಾಚರಣೆಯು ಇಂದು ಬೆಳಿಗ್ಗೆ 10 ಗಂಟೆಗೆ ಬಾವುಟಗುಡ್ಡೆ ಸಂತ ಅಲೋಶಿಯಸ್ ಪ್ರೌಢಶಾಲೆ, ಸಭಾಂಗಣದಲ್ಲಿ ನಡೆಯಲಿದೆ.

Also Read  ನಾಳೆ(ಡಿ.03.) ರಾಮಕುಂಜದಲ್ಲಿ 'ಅಕ್ಷರ ಹಬ್ಬ - 2017' ಕಾರ್ಯಕ್ರಮ ► 3ಡಿ ಶೋ, ವಿಜ್ಞಾನ ಮಾದರಿ ಪ್ರದರ್ಶನ, ಪುಸ್ತಕ ಪ್ರದರ್ಶನ, ಕ್ಯಾಂಪ್ಕೋ ಉತ್ತನ್ನಗಳ ಪ್ರದರ್ಶನ

error: Content is protected !!
Scroll to Top