ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಮಂಗಳೂರು ➤ ಫೀಲ್ಡ್ ಸರ್ವಿಸ್ ಇಂಜಿನಿಯರ್ ಹುದ್ದೆಗೆ ನೇರ ನೇಮಕಾತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಸಪ್ಟೆಂಬರ್.5.ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಮಂಗಳೂರು, ಮಹಾನಗರಪಾಲಿಕೆ ಕಟ್ಟಡ, ಲಾಲ್‍ಬಾಗ್, ಇಲ್ಲಿ ಪೇಟಿಯಂ ಹಾಗೂ ಸೋನಿ ಕಂಪೆನಿ ವತಿಯಿಂದ ಫೀಲ್ಡ್ ಸರ್ವಿಸ್ ಇಂಜಿನಿಯರ್ ಹುದ್ದೆಗೆ (ವೇತನ–20,000) ನೇರ ನೇಮಕಾತಿಯು ಸಪ್ಟೆಂಬರ್ 7 ರಂದು ಬೆಳಿಗ್ಗೆ 10 ಗಂಟೆಯಿಂದ ಅಪರಾಹ್ನ 3 ಗಂಟೆಯವರೆಗೆ ನಡೆಯಲಿದೆ.


ಎಸ್.ಎಸ್.ಎಲ್.ಸಿ., ಪಿಯುಸಿ, ಐಟಿಐ, ಡಿಪ್ಲೋಮಾ ಹಾಗೂ ಪದವಿ ವಿದ್ಯಾರ್ಹತೆಯೊಂದಿಗೆ ಡ್ರೈವಿಂಗ್ ಲೈಸೆನ್ಸ್ ಹೊಂದಿರುವ ಅಭ್ಯರ್ಥಿಗಳು ಹಾಗೂ ಎಂ.ಬಿ.ಎ. ಇಂಟರ್‍ನ್‍ಶಿಪ್ ಮಾಡಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವ ವಿವರವುಳ್ಳ ಬಯೋಡಾಟಾ ಹಾಗೂ ಆಧಾರ್ ಕಾರ್ಡ್‍ನೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಮಂಗಳೂರು, ದೂರವಾಣಿ ಸಂಖ್ಯೆ: 0824-2457139ನ್ನು ಸಂಪರ್ಕಿಸಬಹುದು ಎಂದು ಉದ್ಯೋಗಾಧಿಕಾರಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

Also Read  ಪುತ್ತೂರು: ಚುನಾವಣಾಧಿಕಾರಿಯಿಂದ ಮತಗಟ್ಟೆಗಳ ಭೇಟಿ ➤ ಅಭ್ಯರ್ಥಿಗಳ ಚಿಹ್ನೆ ಇರುವ ಪತ್ರ ಹಂಚಿಕೆ ಪತ್ತೆ

error: Content is protected !!
Scroll to Top