2019-20ನೇ ಸಾಲಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ➤ಇದರವತಿಯಿಂದ ವಿದ್ಯಾಸಿರಿ ಸಹಾಯಧನಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಸಪ್ಟೆಂಬರ್.5.2019-20ನೇ ಸಾಲಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ ಅಲ್ಪಸಂಖ್ಯಾತರ ಸಮುದಾಯದ(ಮುಸ್ಲಿಂ, ಜೈನ್, ಕ್ರಿಶ್ಚಿಯನ್, ಸಿಖ್, ಭೌಧ್ದ ಮತ್ತು ಪಾರ್ಸಿ) ಮೆಟ್ರಿಕ್ ನಂತರದ ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನಿಸಲಾಗಿದೆ.

ಸರ್ಕಾರಿ ವಿದ್ಯಾರ್ಥಿ ನಿಲಯಗಳಲ್ಲಿ ಪ್ರವೇಶ ದೊರಕದೆ ಇರುವ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಮುಂದುವರಿಸಲು ಅನುಕೂಲವಾಗುವಂತೆ ಊಟ ಮತ್ತು ವಸತಿ ಸೌಲಭ್ಯಕ್ಕೆ ಸಹಾಯಧನ ಒದಗಿಸಲು ಅರ್ಜಿಯನ್ನು ಆಹ್ವಾನಿಸಲಾಗಿದೆ.ವಿದ್ಯಾರ್ಥಿಗಳು ಗ್ರಾಮೀಣ ಪ್ರದೇಶದವರಾಗಿದ್ದು ವ್ಯಾಸಂಗ ಮಾಡುವ ಕಾಲೇಜಿನಿಂದ ಕನಿಷ್ಠ 5 ಕಿ.ಮೀ ದೂರದವರಾಗಿರಬೇಕು.

Also Read  ಮಂಗಳೂರು ವಿವಿ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ವೆಬಿನಾರ್

ಅರ್ಜಿಯನ್ನು ಸೆಪ್ಟೆಂಬರ್ 20 ರೊಳಗೆ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಯವರ ಕಛೇರಿ ಮೌಲಾನಾ ಆಝಾದ್ ಭವನ, ಓಲ್ಡ್ ಕೆಂಟ್ ರಸ್ತೆ, ಪಾಂಡೇಶ್ವರ, ಮಂಗಳೂರು ಅಥವಾ ಇಲಾಖಾ ವೆಬ್‍ಸೈಟ್ https://gokdom.kar.nic.in  ನಿಂದ ಡೌನ್‍ಲೋಡ್ ಮಾಡಿ ಕಳುಹಿಸಬಹುದೆಂದು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

error: Content is protected !!
Scroll to Top