2018-19 ನೇ ಸಾಲಿನ ಘಟಕದ ಒಳಗಿನ ಪ್ರಾಥಮಿಕ ಶಾಲಾ ಶಿಕ್ಷಕರ ವರ್ಗಾವಣೆ ಕೌನ್ಸಿಲಿಂಗ್

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.6.2018-19 ನೇ ಸಾಲಿನ ಘಟಕದ ಒಳಗಿನ ಪ್ರಾಥಮಿಕ ಶಾಲಾ ಶಿಕ್ಷಕರ ವೃಂದದ ಕಡ್ಡಾಯ ವರ್ಗಾವಣೆ ಕೌನ್ಸಿಲಿಂಗ್ ಸಪ್ಟೆಂಬರ್ 7 ರಂದು ಬೆಳಿಗ್ಗೆ 11 ಗಂಟೆಗೆ ಲೇಡಿಹಿಲ್ ವಿಕ್ಟೋರಿಯ ಪ್ರೌಢ ಶಾಲೆ, ಮಂಗಳೂರು ಇಲ್ಲಿ ನಡೆಯಲಿದೆ.

ಸಪ್ಟೆಂಬರ್ 11 ರಂದು ಬೆಳಿಗ್ಗೆ 10.30 ಗಂಟೆಗೆ ಪ್ರಾಥಮಿಕ ಶಾಲಾ ಶಿಕ್ಷಕ ವೃಂದದ ಪರಸ್ಪರ ವರ್ಗಾವಣೆ ಕೌನ್ಸಿಲಿಂಗ್ ಉಪನಿರ್ದೇಶಕರ ಕಚೇರಿ (ಆಡಳಿತ) ಸಾರ್ವಜನಿಕ ಶಿಕ್ಷಣ ಇಲಾಖೆ ಮಂಗಳೂರು ಇಲ್ಲಿ ಶಿಕ್ಷಕರ ಆದ್ಯತಾ ಪಟ್ಟಿ ಪ್ರಕಾರ ನಡೆಯಲಿದೆ. ಸಂಬಂಧಿಸಿದ ಶಿಕ್ಷಕರು ನಿಗಧಿ ಪಡಿಸಿದ ದಿನಾಂಕದಂದು ಕೌನ್ಸಿಲಿಂಗ್ ಹಾಜರಾಗಲು ಸೂಚಿಸಿದೆ.ಹೆಚ್ಚಿನ ಮಾಹಿತಿಗಾಗಿ ಸಂಬಂಧಿಸಿದ ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಚೇರಿ ಸಂಪರ್ಕಿಸಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ವೈ ಶಿವರಾಮಯ್ಯ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  ಕಡಬ: ಆಗಸ್ಟ್ 27ಕ್ಕೆ ತಾಲೂಕು ಪಂ. ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ

error: Content is protected !!
Scroll to Top