2018-19 ನೇ ಸಾಲಿನಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿಯಲ್ಲಿ ವಿಧಾನಪರಿಷತ್ ಸದಸ್ಯರ ಅನುದಾನ ಬಿಡುಗಡೆ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.6.ವಿಧಾನಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪ್ರಜಾರಿ ಅವರ 2018-19 ನೇ ಸಾಲಿನ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿಯಲ್ಲಿ ಮೂಡಬಿದಿರೆ ವಿಧಾನಸಭಾ ಕ್ಷೇತ್ರದ ನೆಲ್ಲಿಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೋರುಗುಡ್ಡೆ ಪ್ರದೇಶದಲ್ಲಿ ಬಸ್ ನಿಲ್ದಾಣ ರಚನೆ ಕಾಮಗಾರಿಗೆ ರೂ.2 ಲಕ್ಷ ಅನುದಾನವನ್ನು ಬಿಡುಗಡೆ ಮಾಡಲಾಗಿದೆ .


ವಿಧಾನಪರಿಷತ್ ಸದಸ್ಯ ಐವನ್ ಡಿಸೋಜಾ ಅವರ 2018-19ನೇ ಸಾಲಿನ ಅನುದಾನದಲ್ಲಿ ಮಂಗಳೂರು ತಾಲೂಕು ಎಡಪದವು ಗ್ರಾಮ ಪಂಚಾಯತ್ ವ್ಯಾಪ್ತಿಯ ಎಡಪದವು ಮಸೀದಿ ಬಳಿ ಹೈಮಾಸ್ಟ್ ದೀಪದ ಅಳವಡಿಕೆ ಕಾಮಗಾರಿಗೆ ರೂ.1 ಲಕ್ಷ ಅನುದಾನವನ್ನು ಬಿಡುಗಡೆ ಮಾಡಲಾಗಿದೆ .ವಿಧಾನಪರಿಷತ್ ಸದಸ್ಯ ಎನ್. ರವಿಕುಮಾರ್ ಅವರ 2017-18 ನೇ ಸಾಲಿನ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿಯಲ್ಲಿ ಸುಳ್ಯ ತಾಲೂಕಿನ ದೇವಚಳ್ಳ ಗ್ರಾಮದ ಪರಿಶಿಷ್ಠ ಪಂಗಡದ ಮನೆಗಳಿಗೆ ಸಂಪರ್ಕ ಕಲ್ಪಿಸುವ ಹುರುಳಿಯಡ್ಕ ಕುದುರೆಗುಂಡಿ ರಸ್ತೆಯನ್ನು ಕಾಂಕ್ರೀಟ್ ರಸ್ತೆಯನ್ನಾಗಿ ನಿರ್ಮಿಸುವ ಕಾಮಗಾರಿಗೆ ರೂ.5 ಲಕ್ಷ ಅನುದಾನವನ್ನು ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.

Also Read  ನೆಲ್ಯಾಡಿ: ಬುಲೆಟ್ ಟ್ಯಾಂಕರ್ ನ ಹಿಂಭಾಗ ಕಾರಿಗೆ ಢಿಕ್ಕಿ ➤ ತೋಡಿಗೆ ಉರುಳಿಬಿದ್ದ ಕಾರು..

error: Content is protected !!
Scroll to Top