ಅಪಘಾತದಲ್ಲಿ ಅಪರಿಚಿತ ವ್ಯಕ್ತಿ ಸಾವು

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.6.ಆಗಸ್ಟ್ಟ್ 27 ರಂದು ಬೆಳಿಗ್ಗೆ 3.50 ರಂಟೆಗೆ ಮಂಗಳೂರು ನಗರದ ಬಂಟ್ಸ್ ಹಾಸ್ಟೆಲ್ ಜಂಕ್ಷನ್ ಸಮೀಪದ ವಿಜಯ ಕ್ಲಿನಿಕ್ ಬಳಿ ಕೆಎ-53-ಬಿ-0899 ನಂಬರಿನ ಗೂಡ್ಸ್ ಟೆಂಪೋ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ಸುಮಾರು 70 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿಯು ಗಂಭೀರ ಸ್ವರೂಪದ ಗಾಯಗೊಂಡಿದ್ದರು.

ಗಾಯಾಳು ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ದಾಖಲಾಗಿರುವ ಬಗ್ಗೆ ಸಂಚಾರ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಗಾಯಾಳು ಅಪರಿಚಿತ ವ್ಯಕ್ತಿಯು ಸಪ್ಟೆಂಬರ್ 5 ರಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು, ಈ ಅಪರಿಚಿತ ವ್ಯಕ್ತಿಯ ಮೃತದೇಹವನ್ನು ವೆನ್ಲಾಕ್ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ಮೃತ ವ್ಯಕ್ತಿಯ ವಾರೀಸುದಾರರು ಇದ್ದಲ್ಲಿ ಸಂಚಾರ ಪೂರ್ವ ಪೊಲೀಸ್ ಠಾಣೆ ದೂರವಾಣಿ ಸಂಖ್ಯೆ : 0824-2220523, 9480805337 ಸಂಪರ್ಕಿಸಲು ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Also Read  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ದಂಪತಿಗೆ ಕೊರೊನಾ- ದೃಢ

error: Content is protected !!
Scroll to Top