ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ರಾಜೀನಾಮೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.06. ದ.ಕ. ಜಿಲ್ಲಾಧಿಕಾರಿಯಾಗಿರುವ ಎಸ್. ಸಸಿಕಾಂತ್ ಸೆಂಥಿಲ್ ಅವರು ಐಎಎಸ್ ಸೇವೆಗೆ ಹಠಾತ್ ರಾಜೀನಾಮೆ ಸಲ್ಲಿಸಿದ್ದಾರೆ.

2017ರ ಅಕ್ಟೋಬರ್ ನಿಂದ ಅವರು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿ ಸೇವೆಯಲ್ಲಿದ್ದ ಅವರು ಜಿಲ್ಲೆಯಲ್ಲಿನ ಭೀಕರ ಮಳೆ, ಪ್ರವಾಹ, ಅತಿವೃಷ್ಟಿ, ಡೆಂಗ್ ಹಾವಳಿ, ಮರಳು ಮತ್ತಿತರ ಸಮಸ್ಯೆಗಳನ್ನು ಯಶಸ್ವಿಯಾಗಿ ನಿರ್ವಹಿಸಿದ್ದರು. ಇದೀಗ ವೈಯಕ್ತಿಕ ಕಾರಣದಿಂದ ರಾಜೀನಾಮೆಯ ನಿರ್ಧಾರ ತೆಗೆದುಕೊಂಡಿದ್ದಾರೆ.

Gems

Scroll to Top