ದಕ್ಷಿಣ ಕನ್ನಡದ ನೂತನ ಜಿಲ್ಲಾಧಿಕಾರಿಯಾಗಿ ಸಿಂಧು ಬಿ. ರೂಪೇಶ್ ನೇಮಕ ➤ ಸೆಂಥಿಲ್ ರಾಜೀನಾಮೆ ಬೆನ್ನಲ್ಲೇ ನೂತನ ಜಿಲ್ಲಾಧಿಕಾರಿಯನ್ನು ನೇಮಿಸಿದ ಸರಕಾರ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.06. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ರಾಜೀನಾಮೆ ನೀಡಿದ ಬೆನ್ನಲ್ಲೇ ನೂತನ ಜಿಲ್ಲಾಧಿಕಾರಿಯನ್ನಾಗಿ 2011ರ ಬ್ಯಾಚ್‌ನ ಐಎಎಸ್ ಅಧಿಕಾರಿ ಸಿಂಧು ಬಿ. ರೂಪೇಶ್ ಅವರನ್ನು ನೇಮಕಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಬಿ.ಇ. ಪದವೀಧರೆಯಾಗಿರುವ ಸಿಂಧು ಬಿ.ರೂಪೇಶ್ 2011ನೇ ಸಾಲಿನ ಸಿವಿಲ್ ಸರ್ವಿಸ್ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದರು. ಈ ಹಿಂದೆ ಉಡುಪಿ ಜಿಲ್ಲಾ ಪಂಚಾಯತ್ ಸಿಇಒ ಆಗಿ ಕಾರ್ಯ ನಿರ್ವಹಿಸಿದ್ದ ಇವರನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ.

Also Read  ಪ್ರೀತಿಯಲ್ಲಿ ನಂಬಿ ಮೋಸ ಹೋಗಿದ್ದಿರ ಮನೆಯಲ್ಲಿ ನಿಮ್ಮ ಪ್ರೀತಿ ಒಪ್ಪದಿದ್ದರೆ ಹೀಗೆ ಮಾಡಿ. ನಿಮ್ಮ ಕಷ್ಟಗಳು ಪರಿಹಾರ ಆಗುತ್ತದೆ

Gems

error: Content is protected !!
Scroll to Top