(ನ್ಯೂಸ್ ಕಡಬ) newskadaba.com ನೂಜಿಬಾಳ್ತಿಲ,ಸಪ್ಟೆಂಬರ್.7.ನೂಜಿಬಾಳ್ತಿಲ ಬೆಥನಿ ವಿದ್ಯಾಸಂಸ್ಥೆಯ ಇರ್ವರು ವಿದ್ಯಾರ್ಥಿಗಳು ಜಿಲ್ಲಾಮಟ್ಟದ ಗುಡ್ಡಗಾಡು ಓಟದಲ್ಲಿ ವಿಜೇತರಾಗಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಪದವಿ ಪೂರ್ವ ಶಿಕ್ಷಣ ಇಲಾಖೆ ಮಂಗಳೂರು ಹಾಗೂ ವಿಟ್ಲ ವಿಠಲ ಪದವಿ ಪೂರ್ವ ಕಾಲೇಜಿನ ಸಹಯೋಗದಲ್ಲಿ ಶುಕ್ರವಾರ ನಡೆದ ದಕ್ಷಿಣ ಕನ್ನಡ ಜಿಲ್ಲಾಮಟ್ಟದ ಪದವಿ ಪೂರ್ವ ವಿದ್ಯಾರ್ಥಿಗಳ ಗುಡ್ಡಗಾಡು ಓಟ 2019ರಲ್ಲಿ ನೂಜಿಬಾಳ್ತಿಲ ಬೆಥನಿ ಪ.ಪೂ. ಕಾಲೇಜಿನಿಂದ 11 ವಿದ್ಯಾರ್ಥಿಗಳು ಭಾಗವಹಿಸಿದ್ದು, ಮಹಿಳೆಯರ ತಂಡ ಪ್ರಶಸ್ತಿಯಲ್ಲಿ ಪ್ರಜ್ಞಾ ಡಿ.ಎಚ್. ದ್ವಿತೀಯ ಸ್ಥಾನವನ್ನು ಹಾಗೂ ಪ್ರಿನ್ಸ್ ಕೆ. 5ನೇ ಸ್ಥಾನವನ್ನು ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಸಂಸ್ಥೆಯ ಪ್ರಾಂಶುಪಾಲರಾದ ಜಾರ್ಜ್ ಟಿ.ಎಸ್. ಅವರ ಮಾರ್ಗದರ್ಶನದಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾದ ಪುನೀತ್ ಕೆ ಹಾಗೂ ಮತ್ತಾಯಿ ಓ.ಜೆ. ಅವರು ತರಬೇತಿ ನೀಡಿರುತ್ತಾರೆ.
