ಮಂಗಳೂರು: ಭೀಕರ ರಸ್ತೆ ಅಪಘಾತಕ್ಕೆ ಕಾಲೇಜು ವಿದ್ಯಾರ್ಥಿನಿ ಬಲಿ ➤ ನಜ್ಜುಗುಜ್ಜಾದ ಸ್ಕಾರ್ಪಿಯೋ ಕಾರು

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.07. ಸ್ಕಾರ್ಪಿಯೋ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಹಾರಿ ವಿರುದ್ಧ ದಿಕ್ಕಿನಿಂದ ತೆರಳುತ್ತಿದ್ದ ಲಾರಿಗೆ ಢಿಕ್ಕಿಯಾದ ಪರಿಣಾಮ ಕಾಲೇಜು ವಿದ್ಯಾರ್ಥಿನಿಯೋರ್ವಳು ಮೃತಪಟ್ಟು, ಒಂಭತ್ತು ಮಂದಿ ಗಂಭೀರ ಗಾಯಗೊಂಡ ಘಟನೆ ನಗರದ ಹೊರವಲಯದ ಸುರತ್ಕಲ್ ಸಮೀಪದ ಮುಕ್ಕ ಎಂಬಲ್ಲಿ ಶನಿವಾರ ಸಂಜೆ ನಡೆದಿದೆ.

ಮೃತ ವಿದ್ಯಾರ್ಥಿನಿಯನ್ನು ಕಾರಿನಲ್ಲಿದ್ದ ಮಣಿಪಾಲದ ಕಾಲೇಜೊಂದರ ಇಂಜಿನಿಯರಿಂಗ್ ವಿದ್ಯಾರ್ಥಿನಿ ಗ್ಲೋರಿಯಾ(24) ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಚಾಲಕ ಸೇರಿ 9 ಮಂದಿ ವಿದ್ಯಾರ್ಥಿಗಳು ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸುರತ್ಕಲ್ ಸಂಚಾರಿ ಠಾಣಾ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

Also Read  ನೆಹರೂ ಯುವ ಕೇಂದ್ರ ಜೀವನ ಕೌಶಲ್ಯ ಶಿಕ್ಷಣ ಶಿಬಿರದ ಸಮಾರೋಪ

Gems

error: Content is protected !!
Scroll to Top