ಮೈಸೂರು ದಸರಾ ಕನ್ನಡ ಪುಸ್ತಕ ಮಾರಾಟ ಮೇಳ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.9.ಜಗತ್ತಿನ ಪ್ರಸಿದ್ಧ ಮೈಸೂರು ದಸರಾ ಉತ್ಸವ-2019ರಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಮೈಸೂರು ದಸರಾ ಉತ್ಸವ ಸಮಿತಿ, ಮೈಸೂರು ಇವರ ಸಂಯುಕ್ತಾಶ್ರಯದಲ್ಲಿ ನಡೆಯಲಿದೆ.

Gems

ಸೆಪ್ಟಂಬರ್ 29 ರಿಂದ ಅಕ್ಟೋಬರ್ 7 ರವರೆಗೆ “ಮೈಸೂರು ದಸರಾ ಕನ್ನಡ ಪುಸ್ತಕ ಮಾರಾಟ ಮೇಳ-2019”ನ್ನು ಕಾಡಾ ಮೈದಾನ, ಮೈಸೂರು ಇಲ್ಲಿ ಏರ್ಪಡಿಸಲಾಗಿದೆ. ಈ ಪುಸ್ತಕ ಮೇಳದಲ್ಲಿ ಕನ್ನಡ ಪ್ರಕಾಶಕರು/ಮಾರಾಟಗಾರರು ಭಾಗವಹಿಸಬಹುದು. ಮಳಿಗೆಯೊಂದಕ್ಕೆ 2,000/-ರೂ.ಗಳ ಭದ್ರತಾ ಠೇವಣಿ ಡಿ.ಡಿ.ಯನ್ನು ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಬೆಂಗಳೂರು ಅವರ ಹೆಸರಿನಲ್ಲಿ ಸಲ್ಲಿಸಬೇಕು.

ಮೇಳದಲ್ಲಿ ಭಾಗವಹಿಸಲು ಇಚ್ಚಿಸುವ ಪ್ರಕಾಶಕರು/ಮಾರಾಟಗಾರರು ನಿಗದಿತ ಅರ್ಜಿ ನಮೂನೆಯನ್ನು ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರಿನ ಕಚೇರಿ ಅಥವಾ ಆಯಾ ಜಿಲ್ಲೆಯಲ್ಲಿರುವ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಚೇರಿಗಳಲ್ಲಿ ಅಥವಾ ಪ್ರಾಧಿಕಾರದ ವೆಬ್‍ಸೈಟ್  www.kannadapustakapradhikara.com ನಲ್ಲಿ ಉಚಿತವಾಗಿ ಪಡೆದುಕೊಳ್ಳಬಹುದು.

Also Read  ಜೂ.01 ರಿಂದ 61 ದಿನಗಳ ಕಾಲ ಮೀನುಗಾರಿಕೆಗೆ ನಿಷೇಧ

ಭರ್ತಿಮಾಡಿದ ಅರ್ಜಿಯನ್ನು ಡಿ.ಡಿ.ಯೊಂದಿಗೆ ಸೆಪ್ಟಂಬರ್ 21 ರೊಳಗೆ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು ಇಲ್ಲಿಗೆ ಅಂಚೆಯ ಮೂಲಕ ಹಾಗೂ ಇ-ಮೇಲ್kannadappradhikara@gmail.com ರ ಮೂಲಕ ಸಲ್ಲಿಸಲು ಕೋರಿದೆ. ನಿರ್ಮಿಸಲಾಗುವ 50 ಮಳಿಗೆಗಳನ್ನು ಆದ್ಯತೆಯ ಮೇರೆಗೆ ಹಂಚಿಕೆ ಮಾಡಲಾಗುತ್ತದೆ.ಹೆಚ್ಚಿನ ಮಾಹಿತಿಗಾಗಿ : ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-560002 ದೂರವಾಣಿ 080-22484516 / 22107704 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

error: Content is protected !!
Scroll to Top