(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.9.ಸಮಾಜ ಕಲ್ಯಾಣ ಇಲಾಖಾ ವತಿಯಿಂದ 2019-20ನೇ ಸಾಲಿನಲ್ಲಿ ಜಿ.ಎನ್.ಎಂ., ಬಿ.ಎಸ್.ಸಿ, ಪಿ.ಬಿ.ಬಿಎಸ್ಸಿ, ಎಂ.ಎಸ್ಸಿ ನರ್ಸಿಂಗ್ ಮತ್ತು ಅರೆವೈದ್ಯಕೀಯ ಕೋರ್ಸ್‍ಗಳಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳನ್ನು ಪ್ರತ್ಯೇಕವಾಗಿ ಅರ್ಜಿ ಆಹ್ವಾನಿಸಿ ತರಬೇತಿಗೆ ನಿಯೋಜಿಸಲಾಗುವುದಿಲ್ಲ.
ಆದ್ದರಿಂದ ಜಿ.ಎನ್.ಎಂ ಕೋರ್ಸ್‍ಗೆ ಪ್ರವೇಶ ಬಯಸುವ ಅಭ್ಯರ್ಥಿಗಳು ಕರ್ನಾಟಕ ರಾಜ್ಯ ಶುಶ್ರೂಷ ಪರೀಕ್ಷಾ ಮಂಡಳಿ, ಬೆಂಗಳ್ರರು ಅವರ ವೆಬ್‍ಸೈಟ್: http://www.ksdneb.org ಹಾಗೂ ಅರೆ ವೈದ್ಯಕೀಯ ಕೋರ್ಸ್‍ಗೆ ಪ್ರವೇಶ ಬಯಸುವ ಅಭ್ಯರ್ಥಿಗಳು ಪ್ಯಾರಾ ಮೆಡಿಕಲ್ ಬೋರ್ಡ್, ಬೆಂಗಳೂರು ರವರ ವೆಬ್‍ಸೈಟ್: http://www.pmbkarnataka.org ಮತ್ತು ಬಿ.ಎಸ್.ಸಿ, ಪಿ.ಬಿ.ಬಿಎಸ್ಸಿ, ಎಂ.ಎಸ್ಸಿ ನರ್ಸಿಂಗ್ ಕೋರ್ಸ್‍ಗೆ ಪ್ರವೇಶ ಬಯಸುವ ಅಭ್ಯರ್ಥಿಗಳು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ, ಬೆಂಗಳೂರು ಇವರ ವೆಬ್‍ಸೈಟ್: http://www.rguhs.ac.in ನಲ್ಲಿ ಅರ್ಜಿ ಆಹ್ವಾನಿಸಿದಾಗ ವೆಬ್‍ಸೈಟ್‍ನಲ್ಲಿ ಅರ್ಜಿ ಸಲ್ಲಿಸಿ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸುವಂತೆ ದ.ಕ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ, ಉಪನಿರ್ದೇಶಕರ ಪ್ರಕಟಣೆ ತಿಳಿಸಿದೆ.