(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.9.ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ 2019-20ನೇ ಸಾಲಿನ ದ.ಕ. ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟವನ್ನು ಸಪ್ಟೆಂಬರ್ 17 ರಂದು ಮಂಗಳೂರು ನಗರದ ಮಂಗಳ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು ಹಾಗೂ ಮಹಾನಗರಪಾಲಿಕೆ, ಮಂಗಳೂರು ಇವರುಗಳ ಸಂಯುಕ್ತ ಆಶ್ರಯದಲ್ಲಿ ಸಂಘಟಿಸಲಾಗುತ್ತಿದೆ.
ದ.ಕ. ಜಿಲ್ಲೆಯ ತಾಲೂಕು ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಿ ವೈಯಕ್ತಿಕ ಸ್ಪರ್ಧೆಗಳಲ್ಲಿ ವಿಜೇತರಾಗಿ ಪ್ರಥಮ, ಹಾಗೂ ಗುಂಪು ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಪಡೆದ ಕ್ರೀಡಾಪಟುಗಳು ಈ ಕ್ರೀಡಾಕೂಟದಲ್ಲಿ ಭಾಗವಹಿಸಲು ಅರ್ಹರಿರುತ್ತಾರೆ.ದಸರಾ ಕ್ರೀಡಾಕೂಟದ ಹಾಕಿ, ಬಾಸ್ಕೆಟ್‍ಬಾಲ್, ಟೇಬಲ್ ಟೆನ್ನಿಸ್ ಹ್ಯಾಂಡ್‍ಬಾಲ್, ಬಾಲ್ ಬ್ಯಾಡ್ಮಿಂಟನ್, ಕುಸ್ತಿ ಹಾಗೂ ಶಟಲ್ ಬ್ಯಾಡ್ಮಿಂಟನ್ ಕ್ರೀಡೆಗಳನ್ನು ಪುರುಷರು ಹಾಗೂ ಮಹಿಳೆಯರಿಗೆ ನೇರವಾಗಿ ಜಿಲ್ಲಾ ಮಟ್ಟದಲ್ಲಿ ಸದರಿ ದಿನಾಂಕದಂದು ನಡೆಸಲಾಗುವುದು.
ಟೆನ್ನಿಸ್, ನೆಟ್ ಬಾಲ್, ಈಜು ಸ್ಪರ್ಧೆಗಳನ್ನು ಜಿಲ್ಲಾ ಮಟ್ಟದಲ್ಲಿ ಆಯ್ಕೆ ಮಾಡಲಾಗುವುದು.ತಾಲೂಕು ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಿ ವೈಯಕ್ತಿಕ ಸ್ಪರ್ಧೆ ಹಾಗೂ ಗುಂಪು ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಪಡೆದ ಕ್ರೀಡಾಪಟುಗಳು ತಮ್ಮ ರಾಷ್ಟ್ರೀಕೃತ ಬ್ಯಾಂಕ್ ಖಾತೆಯ ಜೆರಾಕ್ಸ್ ಪ್ರತಿಯನ್ನು ಜಿಲ್ಲಾ ಮಟ್ಟದ ಕ್ರೀಡಾಕೂಟದಂದು ಸಂಘಟಕರಿಗೆ ಕಡ್ಡಾಯವಾಗಿ ಸಲ್ಲಿಸಬೇಕುಭಾಗವಹಿಸುವ ಸ್ಪರ್ಧಾಳುಗಳು ಸ್ಪರ್ಧೆ ನಡೆಯುವ ದಿನದಂದು ಬೆಳಿಗ್ಗೆ 9 ಗಂಟೆಗೆ ಸರಿಯಾಗಿ ಮಂಗಳಾ ಕ್ರೀಡಾಂಗಣದಲ್ಲಿ ವರದಿ ಮಾಡಿಕೊಳ್ಳಬೇಕು ಎಂದು ಉಪನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.