ಸಾಮಾನ್ಯ ವರ್ಗದ ಫಲಾನುಭವಿಗಳಿಗೆ ಸಹಾಯಧನ ➤ ಗಿರಿರಾಜ ಕೋಳಿ ವಿತರಣೆ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.10. ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಮಂಗಳೂರು ಕಚೇರಿ ವತಿಯಿಂದ 2019-20ನೇ ಸಾಲಿನ ಜಿಲ್ಲಾ ಪಂಚಾಯತ್ ಕಾರ್ಯಕ್ರಮದಡಿ ಆಯ್ಕೆಯಾದ ಫಲಾನುಭವಿಗಳಿಗೆ ಗಿರಿರಾಜ ಕೋಳಿ ವಿತರಣೆಯನ್ನು ಜಿಲ್ಲಾ ಪಂಚಾಯತ್‍ನ ಉಪಾಧ್ಯಕ್ಷರಾದ ಕಸ್ತೂರಿ ಪಂಜ ನೆರವೇರಿಸಿದರು.

ಫಲಾನುಭವಿಗಳಿಗೆ ಸಾಂಕೇತಿಕವಾಗಿ ಕೋಳಿ ಮರಿಗಳನ್ನು ವಿತರಣೆ ಮಾಡಿ ಮಾತನಾಡಿದ ಅವರು, ಸರ್ಕಾರ ನೀಡುವ ಯೋಜನೆಗಳ ಪ್ರಯೋಜನವನ್ನು ಸರಿಯಾದ ರೀತಿ ಉಪಯೋಗಿಸಿಕೊಳ್ಳುವಂತೆ ಫಲಾನುಭವಿಗಳಿಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ಉಚಿತವಾಗಿಯೂ ಹಾಗೂ ಸಾಮಾನ್ಯ ವರ್ಗದ ಫಲಾನುಭವಿಗಳಿಗೆ ಶೇಕಡ 90%ರ ಸಹಾಯಧನದಲ್ಲಿ ಪ್ರತಿಫಲಾನುಭವಿಗೆ 10 ಗಿರಿರಾಜ ಕೋಳಿಮರಿಗಳನ್ನು ವಿತರಿಸಲಾಯಿತು.

Also Read  ಸ್ಕೂಟರ್ ಗೆ ಲಾರಿ ಢಿಕ್ಕಿ - ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿದ ಅರುಣ್ ಕುಮಾರ್ ಪುತ್ತಿಲ


ಈ ಸಂದರ್ಭದಲ್ಲಿ ಇಲಾಖೆಯ ಮಂಗಳೂರು ತಾಲೂಕಿನ ಸಹಾಯಕ ನಿರ್ದೇಶಕ ಡಾ. ಎಂ.ಎನ್. ರಾಜಣ್ಣ ಹಾಗೂ ಜಿಲ್ಲಾ ಕೋಳಿ ಸಾಕಾಣಿಕೆ ಮತ್ತು ತರಬೇತಿ ಕೇಂದ್ರದ ಸಹಾಯಕ ನಿರ್ದೇಶಕ ಡಾ. ಈಶ್ವರ್ ಎಂ., ಪಶುವೈದ್ಯಾಧಿಕಾರಿ ಡಾ. ವಿಶ್ವಾರಾಧ್ಯ ಹಾಗೂ ಇಲಾಖೆಯ ಸಿಬ್ಬಂದಿಗಳು ಹಾಜರಿದ್ದರು.

error: Content is protected !!
Scroll to Top