ಸಪ್ಟೆಂಬರ್ 14 ➤ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.10. ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಮಂಗಳೂರು, ಮಂಗಳೂರು ಮಹಾನಗರಪಾಲಿಕೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ತಾಲೂಕು ಯುವಜನ ಒಕ್ಕೂಟ ಹಾಗೂ ಬರ್ಕೆ ಫ್ರೆಂಡ್ಸ್ ಕೊಡೆತ್ತೂರು ಇವರ ಸಂಯುಕ್ತ ಆಶ್ರಯದಲ್ಲಿ ಮಂಗಳೂರು ತಾಲೂಕು ಮಟ್ಟದ ದಸರಾ ಕ್ರೀಡಾಕೂಟ 2019-20 ರ ಉದ್ಘಾಟನಾ ಸಮಾರಂಭ ಸಪ್ಟೆಂಬರ್ 14 ರಂದು ಬೆಳಿಗ್ಗೆ 10 ಗಂಟೆಗೆ ಮಂಗಳಾ ಕ್ರ್ರೀಡಾಂಗಣದಲ್ಲಿ ನಡೆಯಲಿದೆ.


ಮಂಗಳೂರು ದಕ್ಷಿಣ ಶಾಸಕ ಡಿ ವೇದವ್ಯಾಸ್ ಕಾಮತ್ ಸಮಾರಂಭದ ಉದ್ಘಾಟನೆ ನಡೆಸಲಿದ್ದಾರೆ. ಮಂಗಳೂರು ತಾಲೂಕು ಪಂಚಾಯತ್ ಅಧ್ಯಕ್ಷ ಮಹಮ್ಮದ್ ಮೋನು ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ.

Also Read  ಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಆಳಕ್ಕೆ ಉರುಳಿ ಬಿದ್ದ ಕಾರು !

error: Content is protected !!
Scroll to Top