ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ➤ ರೋಟಾವೈರಸ್ ಲಸಿಕೆ ಚಾಲನೆ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.13.ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದಲ್ಲಿ ರೋಟಾವೈರಸ್ ಲಸಿಕೆ ನೀಡಿಕೆಗೆ ಗುರುವಾರ ಚಾಲನೆ ನೀಡಲಾಯಿತು.


ವೆನ್ಲಾಕ್ ಆಸ್ಪತ್ರೆಯ ಆರ್.ಎ.ಪಿ.ಸಿ.ಸಿ ಮಕ್ಕಳ ಆಸ್ಪತ್ರೆ ಸಭಾಂಗಣದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ|| ರಾಮಕೃಷ್ಣ ರಾವ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ವೆನ್ಲಾಕ್ ಅಧೀಕ್ಷಕಿ ಡಾ|| ರಾಜೇಶ್ವರಿ ದೇವಿ ರೋಟಾ ವೈರಾಸ್ ಲಸಿಕೆಯನ್ನು ಮಗುವಿಗೆ ನೀಡುವ ಮೂಲಕ ಚಾಲನೆಯನ್ನು ನೀಡಿದರು. ಕಾರ್ಯಕ್ರಮದಲ್ಲಿ ಮಕ್ಕಳ ತಜ್ಞರಾದ ಡಾ|| ಶೈಲಜ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜ್ಯೋತಿ ಕೆ. ಉಳೆಪಾಡಿ, ಜಿಲ್ಲಾ ಶುಶ್ರೂಷಣಾಧಿಕಾರಿ ಲಿಸ್ಸಿ , ಇಲಾಖಾ ಅಧಿಕಾರಿ ಸಿಬ್ಬಂಧಿಯವರು ಉಪಸ್ಥಿತರಿದ್ದರು.

Also Read  ಭಾರತದಲ್ಲಿ ಇನ್ಮುಂದೆ ಬ್ಯಾಂಕುಗಳು ವಾರದಲ್ಲಿ 5 ದಿನ ಮಾತ್ರ ಓಪನ್‌..!

error: Content is protected !!
Scroll to Top