(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.13. ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜು, ಮಂಗಳೂರು ಇವರ 2019-20ನೇ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭ ಇಂದು ಸಂಜೆ 6 ಗಂಟೆಗೆ ರವೀಂದ್ರ ಕಲಾ ಭವನದಲ್ಲಿ ನಡೆಯಲಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ ಸುಬ್ರಮಣ್ಯ ಯಡಪಡಿತ್ತಾಯ ವಹಿಸಲಿದ್ದಾರೆ. ದ.ಕ ಜಿಲ್ಲಾಧಿಕಾರಿ ಸಿಂಧು ಬಿ. ರೂಪೇಶ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.