ರಸ್ತೆ ಮಧ್ಯೆ ವಿದ್ಯುತ್ ಕಂಬಕ್ಕೆ ಕಟ್ಟಿದ್ದ ಫ್ಲೆಕ್ಸ್ ಬಿದ್ದು ಟೆಕ್ಕಿ ದುರಂತ ಅಂತ್ಯ

(ನ್ಯೂಸ್ ಕಡಬ) newskadaba.com ಚೆನ್ನೈ,ಸಪ್ಟೆಂಬರ್.13. ಚೆನ್ನೈನ ಐಟಿ ಕಂಪನಿಯೊಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಾಫ್ಟ್​ವೇರ್​ ಇಂಜಿನಿಯರ್​ ಶುಭಶ್ರೀ (23) ಕೆಲಸ ಮುಗಿಸಿ ದ್ವಿಚಕ್ರ ವಾಹನದಲ್ಲಿ ಮನೆಗೆ ಮರಳುತ್ತಿದ್ದರು.

ಪಲ್ಲಾವರಂ-ತೋರಿಪಕ್ಕಂ ರಾಡಿಯಲ್​ ರಸ್ತೆಯಲ್ಲಿ ತೆರಳುತ್ತಿದ್ದಾಗ ಕಂಬಕ್ಕೆ ಕಟ್ಟಿದ್ದ ಫ್ಲೆಕ್ಸ್​ ಏಕಾಏಕಿ ಶುಭಶ್ರೀ ಅವರ ಮೇಲೆ ಬಿದ್ದಿದೆ. ಈ ವೇಳೆ ಅವರು ಆಯತಪ್ಪಿ ಕೆಳಗೆ ಬಿದ್ದ ಅವರ ಮೇಲೆ ಹಿಂದಿನಿಂದ ಬರುತ್ತಿದ್ದ ಲಾರಿ ಹರಿದಿದೆ. ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಆ ವೇಳೆಗಾಗಲೇ ಅವರು ಮೃತಪಟ್ಟಿದ್ದರು.ಇಲ್ಲಿನ ಸ್ಥಳೀಯ ಎಐಎಡಿಎಂಕೆ ಪಕ್ಷದ ರಾಜಕೀಯ ಮುಖಂಡ ಸಿ. ಜಯಗೋಪಾಲ್​ ಎಂಬಾತ ತನ್ನ ಕುಟುಂಬದ ವ್ಯಕ್ತಿಯೊಬ್ಬರ ಮದುವೆಗೆ ಸಿಎಂ ಮತ್ತು ಡಿಸಿಎಂಗೆ ಆಹ್ವಾನ ನೀಡಿದ್ದರು. ಇದೇ ವೇಳೆ ಪೊಲೀಸರು ಲಾರಿ ಡ್ರೈವರ್​ ವಿರುದ್ಧ ನಿರ್ಲಕ್ಷ್ಯದಿಂದ ವಾಹನ ಚಾಲನೆ ಮಾಡಿದ ಪ್ರಕರಣ ದಾಖಲಿಸಿದ್ದಾರೆ. ಆದರೆ ರಾಜಕೀಯ ಮುಖಂಡನ ವಿರುದ್ಧ ಕೇಸ್​ ದಾಖಲಿಸಿಕೊಂಡಿರುವ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.

Also Read  ಕಾಜರೊಕ್ಕು- ಶ್ರೀ ರಾಮಕುಂಜೇಶ್ವರ ದೇವಸ್ಥಾನ ಕಾಂಕ್ರಿಟೀಕರಣ ಗುದ್ದಲಿಪೂಜೆ

error: Content is protected !!
Scroll to Top