ಭಾರತೀಯ ಅಂಚೆ ಇಲಾಖೆ ➤ ಅಂಚೆ ನೌಕರರ ಹುದ್ದೆಗೆ ಅರ್ಜಿ ಅವಧಿ ವಿಸ್ತರಣೆ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.14.ಭಾರತೀಯ ಅಂಚೆ ಇಲಾಖೆಯು ಗ್ರಾಮೀಣ ಅಂಚೆ ನೌಕರರ ಹುದ್ದೆಗಳನ್ನು ತುಂಬಲು ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸುವ ದಿನಾಂಕವನ್ನು ಸೆಪ್ಟೆಂಬರ್ 16 ರವರೆಗೆ ವಿಸ್ತರಿಸಿದೆ.

ಸಂಬಂಧಪಟ್ಟ ದಾಖಲೆಗಳನ್ನು ಅಪ್‍ಲೋಡ್ ಮಾಡಲು ಕೊನೆಯ ದಿನ ಸೆಪ್ಟೆಂಬರ್ 22 ಆಗಿದೆ. ಈ ಅವಕಾಶವನ್ನು ಎಲ್ಲಾ ಅರ್ಹ ಅಭ್ಯರ್ಥಿಗಳು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಮಂಗಳೂರು ವಿಭಾಗದ ಹಿರಿಯ ಅಂಚೆ ಅಧೀಕ್ಷಕರ ಪ್ರಕಟಣೆ ತಿಳಿಸಿದೆ.

Scroll to Top