ಪುತ್ತೂರು: ಇಸ್ತ್ರಿ ಹಾಕುತ್ತಿದ್ದ ವೇಳೆ ವಿದ್ಯುತ್ ಶಾಕ್ ➤ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ.14. ಬಟ್ಟೆಗೆ ಇಸ್ತ್ರಿ ಹಾಕುತ್ತಿದ್ದ ವೇಳೆ ವಿದ್ಯುತ್ ಆಘಾತಕ್ಕೊಳಗಾಗಿ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಪುತ್ತೂರಿನಲ್ಲಿ ಶನಿವಾರದಂದು ನಡೆದಿದೆ.

ಮೃತ ವ್ಯಕ್ತಿಯನ್ನು ಪುತ್ತೂರು ತಾಲೂಕು ಕೋಡಿಂಬಾಡಿ ಗ್ರಾಮದ ದರ್ಖಾಸು ನಿವಾಸಿ ದಿ| ಸಂಜೀವ ಗೌಡ ಎಂಬವರ ಪುತ್ರ ಗಣೇಶ್ ಗೌಡ(36) ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ಇಲೆಕ್ಟ್ರೀಷಿಯನ್ ಆಗಿದ್ದ ಗಣೇಶ್ ಶನಿವಾರದಂದು ಬಟ್ಟೆಗೆ ಇಸ್ತ್ರಿ ಹಾಕುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ‌.

error: Content is protected !!
Scroll to Top