ಎಂಡೋಸಲ್ಫಾನ್ ಸಂತ್ರಸ್ತರಿಗೆ ವಿಶೇಷ ಆರೋಗ್ಯ ತಪಾಸಣಾ ಶಿಬಿರ ➤ದಕ್ಷಿಣ ಕನ್ನಡ ಜಿಲ್ಲೆ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.17. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಂಡೋಸಲ್ಫಾನ್ ಸಂತ್ರಸ್ತರಿಗಾಗಿ ನಡೆಯಲಿರುವ ವಿಶೇಷ ಆರೋಗ್ಯ ತಪಾಸಣಾ ಶಿಬಿರಗಳನ್ನು ಜಿಲ್ಲೆಯ ಖಾಸಗಿ ವೈದ್ಯಕೀಯ ಕಾಲೇಜ್‍ಗಳ ಸಹಯೋಗದೊಂದಿಗೆ ಇಂದು ನಡೆಸಲಾಗುವುದು.

ಬೆಳ್ತಂಗಡಿ ತಾಲೂಕಿನ ಕಣಿಯೂರು, ಪುತ್ತೂರು ತಾಲೂಕಿನ ಕೊಯಿ¯, ಉಪ್ಪಿನಂಗಡಿ, ಸುಳ್ಯ ತಾಲೂಕಿನ ಬೆಳ್ಳಾರೆ ಮತ್ತು ಸೆಪ್ಟೆಂಬರ್ 18 ರಂದು ಬೆಳ್ತಂಗಡಿ ತಾಲೂಕಿನ ಕೊಕ್ಕಡ ಹಾಗೂ ಸೆಪ್ಟೆಂಬರ್ 21 ರಂದು ಪುತ್ತೂರು ತಾಲೂಕಿನ ಪಾಣಾಜೆ ಆರೋಗ್ಯ ಕೇಂದ್ರಗಳಲ್ಲಿ ಏರ್ಪಡಿಸಲಾಗಿರುತ್ತದೆ. ಈ ಶಿಬಿರದ ಸದುಪಯೋಗವನ್ನು ಎಂಡೋಸಲ್ಫಾನ್ ಸಂತ್ರಸ್ತರು ಪಡೆದುಕೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಪ್ರಕಟಣೆ ತಿಳಿಸಿದೆ.

Also Read  ನನ್ನ ಮೇಲಿನ ಮುಡಾ ಹಗರಣ, ವಕ್ಫ್ ಅವ್ಯವಹಾರ, 150 ಕೋಟಿಯ ಆರೋಪವನ್ನೂ ಸಿಬಿಐ ತನಿಖೆಗೆ ವಹಿಸಿ-ಬಿ.ವೈ.ವಿ

error: Content is protected !!
Scroll to Top