ಆರೆಸ್ಸೆಸ್ ಕಾರ್ಯಕರ್ತ ಶರತ್ ಹತ್ಯೆ ಪ್ರಕರಣ ► ಇಂದು ಮೂವರ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.16. ಆರೆಸ್ಸೆಸ್ ಕಾರ್ಯಕರ್ತ ಶರತ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಗೆ ಸಹಕರಿಸಿದ ಹಿನ್ನೆಲೆಯಲ್ಲಿ ಬುಧವಾರ ಮತ್ತೆ ಮೂವರನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.

ಬಂಧಿತರನ್ನು ಬೆಳ್ತಂಗಡಿ ತಾಲೂಕಿನ ಪಾರಂಕಿಯ ರಿಯಾಝ್, ನೆಲ್ಯಾಡಿಯ ಸಾದಿಕ್, ಚಾಮರಾಜನಗರದ ಕಲೀಂ ಯಾನೆ ಕಲೀಮುಲ್ಲಾ ಎಂದು ಗುರುತಿಸಲಾಗಿದೆ. ಪಿಎಫ್‌ಐ ಸಂಘಟನೆಯಲ್ಲಿ ಗುರುತಿಸಿಕೊಂಡಿರುವ ಇವರು ಕೊಲೆ ಆರೋಪಿಗಳಿಗೆ ಬೆಂಬಲ ಮತ್ತು ಆಶ್ರಯ ನೀಡಿದ್ದಾರೆ. ಆರೋಪಿಗಳನ್ನು ಪ್ರತ್ಯೇಕ ಕಡೆಗಳಿಂದ ಬಂಧಿಸಲಾಗಿದೆ ಎಂದು ಜಿಲ್ಲಾ ಎಸ್ಪಿ ಸುಧೀರ್ ಕುಮಾರ್ ತಿಳಿಸಿದ್ದಾರೆ. ಮಂಗಳವಾರ ಪಶ್ಚಿಮ ವಲಯ ಐಜಿಪಿ ಹರಿಶೇಖರನ್ ಸುದ್ದಿಗೋಷ್ಠಿ ನಡೆಸಿ ಬಂಟ್ವಾಳ ತಾಲೂಕಿನ ಸಜಿಪ ಮುನ್ನೂರು ಗ್ರಾಮದ ಅಬ್ದುಲ್ ಶಾಫಿ ಅಲಿಯಾಸ್ ಶಾಫಿ (36) ಮತ್ತು ಚಾಮರಾಜನಗರ ಗಾಳಿಪುರ ಗ್ರಾಮದ ಖಲೀಲುಲ್ಲಾ (30) ಎಂಬವರನ್ನು ಬಂಧಿಸಿದ ಬಗ್ಗೆ ಮಾಹಿತಿ ನೀಡಿದ್ದರು. ಇಂದು ಮೂವರ ಬಂಧನದೊಂದಿಗೆ ಐವರು ಆರೋಪಿಗಳನ್ನು ಬಂಧಿಸಿದಂತಾಗಿದೆ‌.

Also Read  ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

error: Content is protected !!
Scroll to Top