ಪ್ರಸಿದ್ಧ ಮೈಸೂರು ದಸರಾ ಉತ್ಸವ-2019➤ಪುಸ್ತಕ ಮಾರಾಟ ಮೇಳ

ನ್ಯೂಸ್ ಕಡಬ) newskadaba.com ಮೈಸೂರು ,ಸಪ್ಟೆಂಬರ್.17. ಜಗತ್ತಿನ ಪ್ರಸಿದ್ಧ ಮೈಸೂರು ದಸರಾ ಉತ್ಸವ-2019ರಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಮೈಸೂರು ದಸರಾ ಉತ್ಸವ ಸಮಿತಿ, ಮೈಸೂರು ಇವರ ಸಂಯುಕ್ತಾಶ್ರಯದಲ್ಲಿ ಪುಸ್ತಕ ಮಾರಾಟ ಮೇಳವನ್ನು ಸೆಪ್ಟೆಂಬರ್ 29ರಿಂದ ಅಕ್ಟೋಬರ್ 7 ರವರೆಗೆ ಮೈಸೂರಿನಲ್ಲಿ ಏರ್ಪಡಿಸಲಾಗಿದೆ.
ಈ ಪುಸ್ತಕ ಮೇಳದಲ್ಲಿ ಕನ್ನಡ ಪ್ರಕಾಶಕರು /ಮಾರಾಟಗಾರರು ಭಾಗವಹಿಸಬಹುದಾಗಿದ್ದು, ಮಳಿಗೆಯೊಂದಕ್ಕೆ ರೂ 2000/ ಗಳ ಭದ್ರತಾ ಠೇವಣಿ ಡಿ.ಡಿ ಯನ್ನು ಆಡಳಿತ ಅಧಿಕಾರಿಗಳು ಕನ್ನಡ ಪುಸ್ತಕ ಪ್ರಾಧಿಕಾರ ಬೆಂಗಳೂರು ಇವರ ಹೆಸರಿನಲ್ಲಿ ಸಲ್ಲಿಸಬೇಕು.

ಮೇಳದಲ್ಲಿ ಭಾಗವಹಿಸಲು ಇಚ್ಚಿಸುವ ಪ್ರಕಾಶಕರು/ ಮಾರಾಟಗಾರರು ನಿಗದಿತ ಅರ್ಜಿ ನಮೂನೆಯನ್ನು ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ ರಸ್ತೆ, ಬೆಂಗಳೂರಿನ ಕಚೇರಿ ಅಥವಾ ಆಯಾ ಜಿಲ್ಲೆಯಲ್ಲಿರುವ ಸಹಾಯಕ ನಿರ್ದೇಶಕರು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಕಚೇರಿಗಳಲ್ಲಿ ಅಥವಾ ಪ್ರಾಧಿಕಾರದ ವೆಬ್‍ಸೈಟ್ www.kannadapustakapradhikara.com ನಲ್ಲಿ ಉಚಿತವಾಗಿ ಪಡೆದುಕೊಳ್ಳಬಹುದು.

Also Read  ಜೂ. 27ರೊಳಗೆ ಪಡಿತರ ಪಡೆಯಲು ಸೂಚನೆ

Gems

ಭರ್ತಿ ಮಾಡಿದ ಅರ್ಜಿಯನ್ನು ಡಿಡಿಯೊಂದಿಗೆ ಸೆಪ್ಟೆಂಬರ್ 21 ರಂದು ಸಂಜೆ 5 ಗಂಟೆಯೊಳಗೆ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆಸಿ ರಸ್ತೆ ಬೆಂಗಳೂರು ಅವರ ಹೆಸರಿಗೆ ಅಂಚೆಯ ಮೂಲಕ ಹಾಗೂ ಇಮೇಲ್ kannadappradhikara@gmail.com ಮೂಲಕ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆಸಿ ರಸ್ತೆ ಬೆಂಗಳೂರು ದೂರವಾಣಿ ಸಂಖ್ಯೆ :-080-22484516/22107704 ಸಂಪರ್ಕಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

error: Content is protected !!
Scroll to Top