➤➤ಸಂಚಾರಿ ವಾಹನದ ಮೂಲಕ ಕಲಾಜಾಥ ಚಾಲನೆ

(ನ್ಯೂಸ್ ಕಡಬ) newskadaba.com ಮಂಗಳೂರು ,ಸಪ್ಟೆಂಬರ್.17. ಸ್ವಚ್ಛ ಭಾರತ್ ಮಿಷನ್ (ಗ್ರಾ) ಯೋಜನೆಯಡಿ ಗ್ರಾಮೀಣ ಕರ್ನಾಟಕವನ್ನು “ಬಯಲು ಬಹಿರ್ದೆಸೆ ಮುಕ್ತ” ಎಂದು ಪೋಷಣೆ ಮಾಡಲಾಗಿದ್ದು, ಗ್ರಾಮೀಣ ಸಮುದಾಯದಲ್ಲಿ ಶೌಚಾಲಯ ಬಳಕೆ ಮತ್ತು “ಸ್ವಚ್ಛ ಸರ್ವೇಕ್ಷಣಾ ಗ್ರಾಮೀಣ-2019”ರ ಕುರಿತು ಗ್ರಾಮೀಣ ಜನರಿಗೆ ಅರಿವು ಮೂಡಿಸಬೇಕಿದೆ. ಈ ಹಿನ್ನೆಲೆಯಲ್ಲಿ ಗ್ರಾಮೀಣ ಜನರಲ್ಲಿ ನೈರ್ಮಲ್ಯ ವಿಷಯಗಳ ಬಗ್ಗೆ ಇನ್ನೂ ಹೆಚ್ಚಿನ ಜಾಗೃತಿ ಮೂಡಿಸುವ ದೃಷ್ಟಿಯಿಂದ ಪ್ರಸಕ್ತ ವರ್ಷದಲ್ಲಿ ಮೊದಲ ಹಂತದಲ್ಲಿ 2000 ಗ್ರಾಮ ಪಂಚಾಯತಿಗಳಲ್ಲಿ ನೀರು ಮತ್ತು ನೈರ್ಮಲ್ಯ ಕುರಿತು ಜಾಗೃತಿ ಮೂಡಿಸಿ “ತ್ಯಾಜ್ಯ ಮುಕ್ತ ಗ್ರಾಮ’ಗಳನ್ನಾಗಿ ರೂಪಿಸುವ ಗುರಿ ಹೊಂದಲಾಗಿರುತ್ತದೆ.


ಈ ಹಿನ್ನೆಲೆಯಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಮೂಲಕ ಜಿಲ್ಲೆಯ ಆಯ್ದ ಗ್ರಾಮ ಪಂಚಾಯತ್‍ಗಳಲ್ಲಿ ಸಂಚಾರಿ ವಾಹನದ ಮೂಲಕ ಕಲಾಜಾಥ ಕಾರ್ಯಕ್ರಮವನ್ನು (ಶ್ರವ್ಯ, ದೃಶ್ಯ ಮಾಧ್ಯಮ,ಬೀದಿ ನಾಟಕ, ಇತ್ಯಾದಿ ಸಾಂಸ್ಕøತಿಕ ಕಾರ್ಯಕ್ರಮಗಳು ಮತ್ತು ಸಿನಿಮಾ, ಡಾಕ್ಯೂಮೆಂಟರಿ, ಜಾಹೀರಾತು, ಕಿರುಚಿತ್ರ ಪ್ರದರ್ಶನ)ವನ್ನು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯು ಆಯೋಜಿಸುತ್ತಿದೆ.

Also Read  ಉಳ್ಳಾಲ: ಯುವಕನಿಗೆ ಚೂರಿಯಿಂದ ಇರಿದು ಕೊಲೆ ಯತ್ನ ➤ ಆಸ್ಪತ್ರೆಗೆ ದಾಖಲು

Gems
ದಕ್ಷಿಣ ಕನ್ನಡ ಜಿಲ್ಲೆಯ ಆಯ್ದ 50 ಗ್ರಾಮ ಪಂಚಾಯತ್‍ಗಳಲ್ಲಿ ಸಂಚರಿಸಲಿರುವ ಕಲಾಜಾಥಕ್ಕೆ ಸೆಪ್ಟೆಂಬರ್ 17 ರಂದು ಬೆಳಿಗ್ಗೆ 10 ಗಂಟೆಗೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‍ನ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಇವರು ಜಿಲ್ಲಾ ಪಂಚಾಯತಿನ ಆವರಣದಲ್ಲಿ ಚಾಲನೆಯನ್ನು ನೀಡಲಿದ್ದಾರೆ ಎಂದು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯವರ ಪರವಾಗಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

Also Read  Breaking News ಉಪ್ಪಿನಂಗಡಿ: ಈಜಲೆಂದು ನೀರಿಗಿಳಿದ ಯುವಕ ನೀರುಪಾಲು..! ➤ ಯುವಕನಿಗಾಗಿ ಶೋಧ ಕಾರ್ಯ

error: Content is protected !!
Scroll to Top