ಸುಬ್ರಹ್ಮಣ್ಯ: ಅಂತಿಮ ಪದವಿ ವಿದ್ಯಾರ್ಥಿ ನೇಣುಬಿಗಿದು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಸೆ.18. ಕಾಲೇಜು ವಿದ್ಯಾರ್ಥಿಯೋರ್ವ ಮನೆ ಸಮೀಪದ ಮರಕ್ಕೆ‌ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ತಡರಾತ್ರಿ ಬೆಳಕಿಗೆ ಬಂದಿದೆ.

ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯನ್ನು ಏನೆಕಲ್ಲು ಗ್ರಾಮದ ಪರಮಲೆ ನಿವಾಸಿ ಪುರುಷೋತ್ತಮ ಎಂಬವರ ಪುತ್ರ, ಸುಬ್ರಹ್ಮಣ್ಯ ಕೆಎಸ್ಎಸ್ ಕಾಲೇಜಿನ ಅಂತಿಮ ಪದವಿ ವಿದ್ಯಾರ್ಥಿ ಭವೀಷ್ ಎಂದು ಗುರುತಿಸಲಾಗಿದೆ. ಮಂಗಳವಾರದಂದು ಕಾಲೇಜಿನಲ್ಲಿ ಪರೀಕ್ಷೆ ಬರೆದು ಮಧ್ಯಾಹ್ನವೇ ಮನೆಗೆ ತೆರಳಿದ್ದ ಭವೀಷ್ ಸಂಜೆಯಾದರೂ ಮನೆಗೆ ಹಿಂತಿರುಗಿರಲಿಲ್ಲ ಎನ್ನಲಾಗಿದೆ. ಹೀಗಾಗಿ ಮನೆಯವರು ಹುಡುಕಾಡಿದಾಗ ರಾತ್ರಿ ವೇಳೆಗೆ ಮನೆ ಸಮೀಪದ ಮರವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ.

Also Read  ನಿಮ್ಮ ಕುಟುಂಬದಲ್ಲಿ ಸಮಸ್ಯೆಗಳು ಬರಬಾರದು ಎಂದರೆ ತಪ್ಪದೇ ಈ ನಿಯಮ ಪಾಲಿಸಿ ಕಷ್ಟಗಳು ಪರಿಹಾರ ಆಗುತ್ತದೆ

ಆತ್ಮಹತ್ಯೆಗೆ ನಿಖರ ಕಾರಣ ಳಿದುಬಂದಿಲ್ಲ. ಸ್ಥಳಕ್ಕೆ ಸುಬ್ರಹ್ಮಣ್ಯ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

error: Content is protected !!
Scroll to Top