ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದ ಉದ್ಘಾಟನೆ ➤ಕ್ರೀಡಾ ಸಾಧಕರಿಗೆ ಗ್ರೇಸ್ ಅಂಕ ನೀಡಲು ಚಿಂತನೆ : ಐವನ್ ಡಿ’ಸೋಜಾ

(ನ್ಯೂಸ್ ಕಡಬ) newskadaba.com ಮಂಗಳೂರು ,ಸಪ್ಟೆಂಬರ್.18. ಪ್ರತಿ ವಿಶ್ವವಿದ್ಯಾನಿಲಗಳಲ್ಲಿ ಕ್ರೀಡೆಯಲ್ಲಿ ಸತತವಾಗಿ ಭಾಗವಹಿಸಿ ಜಿಲ್ಲೆ, ರಾಜ್ಯ, ರಾಷ್ಟ್ರೀಯ ಮಟ್ಟದಲ್ಲಿ ಹೆಸರು ಗಳಿಸಿದ ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡುವ ನಿಯಮವನ್ನು ಜಾರಿಗೊಳಿಸುವಂತೆ ಚಿಂತನೆ ಮಾಡಲಾಗಿದೆ ಎಂದು ಕರ್ನಾಟಕ ವಿಧಾನಪರಿಷತ್ ಶಾಸಕ ಐವನ್ ಡಿ’ಸೋಜ ತಿಳಿಸಿದರು. ಮಂಗಳವಾರ ಜಿಲ್ಲಾಡಳಿತ, ದ.ಕ ಜಿಲ್ಲಾ ಪಂಚಾಯತ್, ಮಂಗಳೂರು ಮಹಾನಗರ ಪಾಲಿಕೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಯುವಜನ ಒಕ್ಕೂಟ ಹಾಗೂ ಕರ್ನಾಟಕ ಪ್ರಾಧಿಕಾರ ಇವರ ಸಂಯುಕ್ತ ಆಶ್ರಯದಲ್ಲಿ ಮಂಗಳ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದ ಉದ್ಘಾಟನೆ ನೆರವೇರಿಸಿ ಅವರು ಮಾತಾನಾಡಿದರು.

ಯುವಜನತೆ ಸದೃಢವಾದರೆ ದೇಶ ಸದೃಢವಾಗುತ್ತದೆ. ಯಾರು ಕ್ರೀಡೆಯಲ್ಲಿ ಭಾಗವಹಿಸುತ್ತಾರೆ, ಯಾರು ಕ್ರೀಡೆಯನ್ನು ತಮ್ಮ ದೈನಂದಿನ ಜೀವನದಲ್ಲಿ ಅಳವಡಿಸುತ್ತಾರೆ ಅಂತಹವರು ಜೀವನದಲ್ಲಿ ಯಶಸ್ಸನ್ನು ಕಾಣುತ್ತಾರೆ, ಎಂಬುವುದಕ್ಕೆ ಬೇಕಾದಷ್ಟು ಉದಾಹರಣೆಗಳು ನಮ್ಮ ಕಣ್ಣ ಮುಂದೆಯೇ ಇದೆ ಎಂದು ಅವರು ಹೇಳಿದರು. ಜಿಲ್ಲೆಯಲ್ಲಿ ಯಾವುದೇ ಕಾರ್ಯಕ್ರಮ ನಡೆದರೂ ಅದು ಬಹಳ ಅಚ್ಚುಕಟ್ಟಾಗಿ ನಡೆಯುತ್ತದೆ. ಉತ್ತಮ ಸಂಘಟಣೆಗೊಳ್ಳುವ ಇಂತಹ ಕ್ರೀಡಾಕೂಟಗಳ ಪ್ರಯೋಜನವನ್ನು ಯುವಜನತೆ ಸದುಪಯೋಗ ಪಡಿಸಿಕೊಂಡು ಜಿಲ್ಲೆ, ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸಾಧನೆಗೈದು ದೇಶದ ಹೆಸರನ್ನು ಉತ್ತುಂಗಕ್ಕೇರಿಸುವ ಕಾರ್ಯವಾಗಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಯುವಜನ ಒಕ್ಕೂಟದ ಅಧ್ಯಕ್ಷ ಸುರೇಶ್ ರೈ ಸೂಡಿಮುಳ್ಳು ಹೇಳಿದರು.

Also Read  ಬೈತಡ್ಕ: ಟ್ಯಾಂಕರ್ ಪಲ್ಟಿ- ಡೀಸೆಲ್ ಸೋರಿಕೆ

ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಪನಿರ್ದೇಶಕ ಪ್ರದೀಪ್ ಡಿ’ಸೋಜ, ದಕ್ಷಿಣ ಕನ್ನಡ ಜಿಲ್ಲಾ ಅಮೆಚೂರು ಕಬಡ್ಡಿ ಅಸೋಸಿಯೇಶನ್ ಕಾರ್ಯದರ್ಶಿ ಪುರುಷೋತ್ತಮ ಪೂಜಾರಿ, ದಕ್ಷಿಣ ಕನ್ನಡ ಜಿಲ್ಲಾ ಅಮೆಚೂರು ಕಬಡ್ಡಿ ಅಸೋಸಿಯೇಶನ್ ಕಾರ್ಯಾಧ್ಯಕ್ಷ ರತನ್ ಶೆಟ್ಟಿ, ಸಹಾಯಕ ಯುವ ಸಬಲೀಕರಣ ಕ್ರೀಡಾಧಿಕಾರಿಗಳಾದ ಮಂಗಳೂರು ವಿಭಾಗದ ಲಿಲ್ಲಿ ಪಾಯಿಸ್, ಬೆಳ್ತಂಗಡಿ ವಿಭಾಗದ ಪ್ರಭಾಕರ, ಪುತ್ತೂರು ವಿಭಾಗದ ಮಾಮಚ್ಚನ್, ಬಂಟ್ವಾಳ ವಿಭಾಗದ ನವೀನ್, ಸುಳ್ಯ ವಿಭಾಗದ ದೇವರಾಜ್ ಮುತ್ಲಾಜೆ ಉಪಸ್ಥಿತರಿದ್ದರು.

Also Read  ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ನೂಜಿಬಾಳ್ತಿಲದ ಪ್ರಜ್ಞಾ ಎನ್

error: Content is protected !!
Scroll to Top