(ನ್ಯೂಸ್ ಕಡಬ) newskadaba.com ಮಂಗಳೂರು ,ಸಪ್ಟೆಂಬರ್.18. ಮಂಗಳೂರು ವಿಶ್ವವಿದ್ಯಾನಿಲಯ , ಕರ್ನಾಟಕ ಇತಿಹಾಸ ಅಕಾಡೆಮಿ ಬೆಂಗಳೂರು, ಸ್ನಾತಕ ಮತ್ತು ಸ್ನಾತಕೋತ್ತರ ಇತಿಹಾಸ ಮತ್ತು ಪುರಾತತ್ವ ವಿಭಾಗವು ಆಯೋಜಿಸುತ್ತಿರುವ ಇತಿಹಾಸ ಪರಂಪರೆ ಉಳಿಸಿ ಕಾರ್ಯಕ್ರಮ ಸೆಪ್ಟೆಂಬರ್ 18 ರಂದು ಮಧ್ಯಾಹ್ನ 3 ಗಂಟೆಗೆ ವಿಶ್ವವಿದ್ಯಾಲಯ ಕಾಲೇಜಿನ ಶಿವರಾಮ ಕಾರಂತ ಸಭಾಂಗಣದಲ್ಲಿ ನಡೆಯಲಿದೆ.
ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಫ್ರೊ. ಪಿ ಸುಬ್ರಮಣ್ಯ ಯಡಪಡಿತ್ತಾಯ ಅಧ್ಯಕ್ಷತೆ ವಹಿಸಲಿದ್ದು, ಇತಿಹಾಸ ಸಂಶೋಧಕ ಪುಂಡಿಕಾೈ ಗಣಪಯ್ಯ ಭಟ್ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.