ಸರಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ ➤ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು ,ಸಪ್ಟೆಂಬರ್.19. ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ(ರಿ) ಕಬ್ಬನ್ ಉದ್ಯಾನವನ, ಬೆಂಗಳೂರು ಇವರ ವತಿಯಿಂದ ಕರ್ನಾಟಕ ರಾಜ್ಯ ಸರಕಾರಿ ನೌಕರರ ಮಕ್ಕಳಿಗೆ 2019 ನೇ ಸಾಲಿನ ಎಸ್.ಎಸ್.ಎಲ್.ಸಿ/ ಪಿ.ಯು.ಸಿ (State/CBSE/ICSE) ವಾರ್ಷಿಕ ಪರೀಕ್ಷೆಯಲ್ಲಿ ಶೇಕಡಾ 90 ಕ್ಕಿಂತ ಹೆಚ್ಚು ಅಂಕ ಪಡೆದು ಉತ್ತೀರ್ಣರಾದವರಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು.


ಇದಕ್ಕೆ ಅರ್ಹರಾದವರು ಮಾಹಿತಿಯನ್ನು ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ, ಕಬ್ಬನ್ ಉದ್ಯಾನವನ, ಬೆಂಗಳೂರು ಅವರಿಗೆ ನೇರವಾಗಿ ಸಲ್ಲಿಸಬೇಕು. ಪ್ರತಿಭಾ ಪುರಸ್ಕಾರ ಅರ್ಜಿಯನ್ನು ಮಂಗಳೂರು ಮಿನಿವಿಧಾನಸೌಧದ ಆವರಣದಲ್ಲಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಕಚೇರಿಯಿಂದ ಪಡೆದುಕೊಳ್ಳಬಹುದು ಸಂಘದ ಜಿಲ್ಲಾಧ್ಯಕ್ಷ ಪಿ.ಕೆ ಕೃಷ್ಣ ಅವರ ಪ್ರಕಟಣೆ ತಿಳಿಸಿದೆ.

Also Read  ವಿಟ್ಲ: ಮನೆಯ ಕಪಾಟಿನಲ್ಲಿರಿಸಿದ್ದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು ➤ ದಂಪತಿಗಳು ಅಂದರ್

error: Content is protected !!
Scroll to Top