ಗುಂಡ್ಯ: ಮೋರಿಗೆ ಢಿಕ್ಕಿ ಹೊಡೆದ ಸ್ವಿಫ್ಟ್ ಕಾರು ➤ ಚಾಲಕ ಮೃತ್ಯು, ಓರ್ವನಿಗೆ ಗಾಯ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಸೆ.19. ಚಾಲಕನ ನಿಯಂತ್ರಣ ತಪ್ಪಿದ ಸ್ವಿಫ್ಟ್ ಕಾರೊಂದು ರಸ್ತೆ ಬದಿಯ ಮೋರಿಗೆ ಢಿಕ್ಕಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲೇ ಮೃತಪಟ್ಟು ಓರ್ವ ಗಾಯಗೊಂಡ ಘಟನೆ ಗುರುವಾರದಂದು ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗುಂಡ್ಯ ಸಮೀಪ ನಡೆದಿದೆ.

ಮೃತ ವ್ಯಕ್ತಿಯನ್ನು ಬೆಂಗಳೂರಿನ ಜಾಲಹಳ್ಳಿ ನಿವಾಸಿ ನಾಗರಾಜ್(60) ಎಂದು ಗುರುತಿಸಲಾಗಿದೆ. ನಾಗರಾಜ್ ಗುರುವಾರದಂದು ತನ್ನ ಸ್ವಿಫ್ಟ್ ಕಾರಿನಲ್ಲಿದ್ದ ಬೆಂಗಳೂರಿನಿಂದ ಪುತ್ತೂರಿಗೆಂದು ಆಗಮಿಸುತ್ತಿದ್ದ ಸಂದರ್ಭ ನಿಯಂತ್ರಣ ತಪ್ಪಿ ಈ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ಜಾಲಹಳ್ಳಿ ನಿವಾಸಿ ಹನುಮಂತ ನಾಯಕ್(26) ಗಾಯಗೊಂಡಿದ್ದು, ನೆಲ್ಯಾಡಿ ಅಶ್ವಿನಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Also Read  ಮಂಗಳೂರು: ಜೂನ್ 1ರಿಂದ ಜುಲೈ 31ರವರೆಗೆ ಮೀನುಗಾರಿಕೆ ನಿಷೇಧ

error: Content is protected !!
Scroll to Top