ಕಲೆ ಮತ್ತು ವಾಸ್ತುಶಿಲ್ಪಗಳಿಗೆ ವಿಶ್ವಕರ್ಮರ ಕೊಡುಗೆ ಅಪಾರ ➤ ಸಚಿವ ಕೋಟ ಶ್ರೀನಿವಾಸ ಪೂಜಾರಿ

(ನ್ಯೂಸ್ ಕಡಬ) newskadaba.com ಕರ್ನಾಟಕ ,ಸಪ್ಟೆಂಬರ್.20.ವಿಶ್ವಕರ್ಮ ಸಮುದಾಯದವರು ಈ ದೇಶದಲ್ಲಿ ಕಲೆ ಮತ್ತು ವಾಸ್ತುಶಿಲ್ಪ, ಮತ್ತು ಕರಕುಶಲತೆಗೆ ನಾಂದಿ ಹಾಡಿದವರು ಎಂದು ಬಂದರು, ಒಳನಾಡು ಜಲಸಾರಿಗೆ, ಮೀನುಗಾರಿಕೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.


ಅವರು ಮಂಗಳವಾರ ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನಗಳ ಸಂಯುಕ್ತ ಆಶ್ರಯದಲ್ಲಿ ‘ವಿಶ್ವಕರ್ಮ ಜಯಂತಿ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ವಿಶ್ವಕರ್ಮ ಜಯಂತಿಯು ವಿಶ್ವಕರ್ಮ ಸಮುದಾಯದವನ್ನು ಜಾಗೃತಿ ಮೂಡಿಸುವ ಉದ್ದೇಶವನ್ನು ಹೊಂದಿದೆ, ಅದೇ ರೀತಿ ಸಮುದಾಯದ ಮೂಲ ಕಸಬನ್ನು ಇನ್ನೂ ಅತ್ಯಂತ ಜನಪ್ರಿಯ ಗೊಳಿಸಲು ಮತ್ತು ಕಲಾ ಕೌಶಲಗಳನ್ನು ಮುಂದಿನ ಪೀಳಿಗೆಗೆ ನೀಡುವಂತಾಗಬೇಕು ಹಾಗೂ ಈ ಸಮಾಜದವರು ಶಿಸ್ತು ಸಂಯಮ ತಾಳ್ಮೆ ಜಾಣತನ, ಸಾಮಾಜಿಕ ಬದ್ಧತೆಯನ್ನು ರೂಢಿಸಿಕೊಂಡು ಬಂದಿದ್ದಾರೆ ಎಂದರು.

Also Read  ಅಯೋಧ್ಯೆ ರಾಮಮಂದಿರ ಸ್ಫೋಟಿಸುವುದಾಗಿ ಬೆದರಿಕೆ ➤ ಹೆಚ್ಚಿದ ಪೊಲೀಸ್ ಭದ್ರತೆ


ಅಧ್ಯಕ್ಷತೆ ವಹಿಸಿದ್ದ ಶಾಸಕ ಡಿ.ವೇದವ್ಯಾಸ ಕಾಮತ್ ಮಾತನಾಡಿ, ನಮ್ಮ ದೇಶದಲ್ಲಿನ ಪ್ರಾಚೀನ ಕಾಲದಲ್ಲಿನ ಅದ್ಭುತ ಕಟ್ಟಡ ನಿರ್ಮಿಸಿದ ಹೆಗ್ಗಳಿಕೆ ಕೀರ್ತಿ ವಿಶ್ವಕರ್ಮ ಸಮುದಾಯಕ್ಕೆ ಸಲ್ಲುತ್ತದೆ. ಬೇಲೂರು, ಹಳೇಬೀಡು, ಹಂಪಿಯ ವಿಶ್ವವಿಖ್ಯಾತ ದೇವಸ್ಥಾನಗಳ ವಾಸ್ತುಶಿಲ್ಪ ಕಲೆ ಇವರ ಕೈಚಳಕ ದಿಂದ ಮೂಡಿಬಂದಿದೆ ಎಂದು ವಿಶ್ವಕರ್ಮ ಸಮಾಜದ ಕೊಡುಗೆಯನ್ನು ಸ್ಮರಿಸಿದರು.ಸಹ ಚಿಂತನ ಮಾಸಪತ್ರಿಕೆಯ ಗೌರವ ಪ್ರಧಾನ ಸಂಪಾದಕ ಬಿ.ಅನಂತಯ್ಯ ಆಚಾರ್ಯ ಮಣಿಪಾಲ್ ಉಪನ್ಯಾಸ ನೀಡಿದರು.


ಕಾರ್ಯಕ್ರಮದಲ್ಲಿ ಮಂಗಳೂರು ತಾಲೂಕು ಪಂಚಾಯತ್ ಅಧ್ಯಕ್ಷ ಮುಹಮ್ಮದ್ ಮೋನು, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರಾ, ಮಂಗಳೂರು ತಾಲೂಕು ತಹಶೀಲ್ದಾರ್ ಗುರುಪ್ರಸಾದ್, ದೇವಸ್ಥಾನದ ಆಡಳಿತ ಮಂಡಳಿಯ ಮೊಕ್ತೇಸರ ಕೆ. ಕೇಶವ ಆಚಾರ್ಯ, ಸುಂದರ ಆಚಾರ್ಯ ಬೇಳುವಾಯಿ, ಲೋಕೇಶ ಆಚಾರ್ಯ ಬಿಜೈ, ಉಪಸ್ಥಿತರಿದ್ದರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್ ಜಿ. ಸ್ವಾಗತಿಸಿದರು.

Also Read  ಬೆಳ್ತಂಗಡಿ: ಅನುಮಾನಸ್ಪದವಾಗಿ ಗೆಳತಿಯರು ಮೃತಪಟ್ಟ ಪ್ರಕರಣ ➤ ವಿಷಪ್ರಾಶನವೇ ಕಾರಣ ಎಂಬ ಶಂಕೆ

error: Content is protected !!
Scroll to Top