(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.20.ದಕ್ಷಿಣ ಕನ್ನಡ ಜಿಲ್ಲೆಯಲ್ಲಿ “ಹೆಣ್ಣು ಮಗುವನ್ನು ರಕ್ಷಿಸಿ, ಹೆಣ್ಣು ಮಗುವನ್ನು ಓದಿಸಿ” ಯೋಜನೆಯ ಮೌಲ್ಯಮಾಪನ ಅಧ್ಯಯನ ಕೈಗೊಳ್ಳಲು ಆಸಕ್ತ ಅರ್ಹ ಸಂಸ್ಥೆಗಳಿಂದ ಪ್ರಸ್ತಾವನೆಯನ್ನು ಆಹ್ವಾನಿಸಲಾಗಿದೆ. ಪ್ರಸ್ತಾವನೆಯನ್ನು ಸಲ್ಲಿಸಲು ಸೆಪ್ಟೆಂಬರ್ 27 ಕೊನೆಯ ದಿನ.
ಹೆಚ್ಚಿನ ವಿವರಗಳಿಗಾಗಿ ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ದ.ಕ. ಜಿಲ್ಲಾ ಪಂಚಾಯತ್ ಕಟ್ಟಡ, ಮಂಗಳೂರು ದೂರವಾಣಿ ಸಂಖ್ಯೆ 0824-2451254 ಈ ಕಚೇರಿಯನ್ನು ಸಂಪರ್ಕಿಸಬೇಕೆಂದು ಪ್ರಕಟಣೆ ತಿಳಿಸಿದೆ.