2019-20ನೇ ಸಾಲಿನಲ್ಲಿ ಪೂರ್ಣಾವಧಿ ಪಿ.ಎಚ್.ಡಿ. ಅಧ್ಯಯನದಲ್ಲಿ ತೊಡಗಿರುವ ಹಿಂದುಳಿದ ವರ್ಗಗಳ ವ್ಯಾಸಂಗ ವೇತನಕ್ಕೆ ಅರ್ಜಿಆಹ್ವಾನ

(ನ್ಯೂಸ್ ಕಡಬ) newskadaba.com ಕರ್ನಾಟಕ ,ಸಪ್ಟೆಂಬರ್.20.2019-20ನೇ ಸಾಲಿನಲ್ಲಿ ಪೂರ್ಣಾವಧಿ ಪಿ.ಎಚ್.ಡಿ. ಅಧ್ಯಯನದಲ್ಲಿ ತೊಡಗಿರುವ ಹಿಂದುಳಿದ ವರ್ಗಗಳ ವ್ಯಾಸಂಗ ವೇತನಕ್ಕೆ ಅರ್ಜಿಆಹ್ವಾನಿಸಲಾಗಿದೆ.

ಪ್ರವರ್ಗ-1, 2ಎ, 3ಎ, 3ಬಿ ಹಾಗೂ ಇತರೆ ಒಬಿಸಿ ವರ್ಗಗಳಿಗೆ ಸೇರಿದ ಅರ್ಹ ನವೀಕರಣ ವಿದ್ಯಾರ್ಥಿಗಳಿಗೆ ಮಾಸಿಕ ರೂ.10,000/- ದಂತೆ ವ್ಯಾಸಂಗ ವೇತನ/ಫೆಲೋಶಿಪ್ ಮಂಜೂರು ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 30 ಕೊನೆಯ ದಿನ.ಹೆಚ್ಚಿನ ವಿವರಗಳಿಗಾಗಿ ಇಲಾಖಾ ವೆಬ್‍ಸೈಟ್  www.backwardclasses.kar.nic.in ಹಾಗೂ ದೂರವಾಣಿ ಸಂಖ್ಯೆ:8050770004 ಸಂಪರ್ಕಿಸಬಹುದೆಂದು ಜಿಲ್ಲಾ ಅಧಿಕಾರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

Also Read  ಎಸ್ಸೆಸ್ಸೆಲ್ಸಿ ಪರೀಕ್ಷೆ ➤ ನಿಷೇಧಾಜ್ಞೆ ಜಾರಿ

Gems

error: Content is protected !!
Scroll to Top