ಕಾರುಗಳ ನಡುವೆ ಡಿಕ್ಕಿ

(ನ್ಯೂಸ್ ಕಡಬ) newskadaba.com ಕಡಬ  ,ಸಪ್ಟೆಂಬರ್.20.ಎರಡು ಕಾರುಗಳ ಮದ್ಯೆ ಡಿಕ್ಕಿ ಸಂಭವಿಸಿದ ಪರಿಣಾಮ ಸ್ವಿಫ್ಟ್ ಕಾರಿನಲ್ಲಿದ್ದ ಇಬ್ಬರು ಗಾಯಗೊಂಡ ಘಟನೆ ಗುರುವಾರ ಸಾಯಂಕಾಲ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಬಲ್ಯ ಜಂಕ್ಷನ್‍ನಲ್ಲಿ ನಡೆದಿದೆ.


ಗಾಯಾಳುಗಳನ್ನು ಬೆಳ್ತಂಗಡಿ ನಿವಾಸಿ ವಾಸುದೇವ ಗೋಖಲೆ(55) ಹಾಗೂ ಅವರ ಪತ್ನಿ ಪೂರ್ಣ ಗೋಖಲೆ(53) ಎಂದು ಗುರುತಿಸಲಾಗಿದೆ. ಕಡಬದಿಂದ ಬೆಳ್ತಂಗಡಿ ಕಡೆಗೆ ತೆರಳುತ್ತಿದ್ದ ಸ್ವಿಫ್ಟ್ ಕಾರು ಬಲ್ಯ ಜಂಕ್ಸನ್‍ನಲ್ಲಿ ನೆಲ್ಯಾಡಿಯತ್ತ ತಿರುವು ಪಡೆಯುತ್ತಿದ್ದಾಗ ಉಪ್ಪಿನಂಗಡಿ ಕಡೆಯಿಂದ ಕಡಬದತ್ತ ಆಗಮಿಸುತ್ತಿದ್ದ ಉಡುಪಿ ಜಿಲ್ಲೆಯ ಬೆಳ್ಮಣ್ ಮೂಲದವರಿದ್ದ ಮಹೀಂದ್ರಾ ಕೆಯುವಿ ನಡುವೆ ಢಿಕ್ಕಿಯುಂಟಾಗಿ ಎರಡೂ ಕಾರುಗಳು ಚರಂಡಿಗೆ ಬಿದ್ದಿವೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಕಡಬ ಠಾಣಾ ಪೆÇಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Also Read  ಮೊರಾರ್ಜಿ ದೇಸಾಯಿ ಬಾಲಕಿಯರ ವಸತಿ/ ಶಾಲೆಗೆ ಅರ್ಜಿ ಆಹ್ವಾನ

error: Content is protected !!
Scroll to Top