ಎನ್.ಟಿ.ಎಸ್.ಇ ಪರೀಕ್ಷೆಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.23.2019-20ನೇ ಶೈಕ್ಷಣಿಕ ಸಾಲಿನಲ್ಲಿ ಸರ್ಕಾರಿ ಉನ್ನತೀಕರಿಸಿದ ಪ್ರಾಥಮಿಕ ಹಾಗೂ ಸರ್ಕಾರಿ ಮತ್ತು ಅನುದಾನಿತ ಪ್ರೌಢಶಾಲೆಗಳ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗಾಗಿ ಎನ್.ಟಿ.ಎಸ್.ಇ ಪರೀಕ್ಷೆಗೆ ಆನ್‍ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಎನ್.ಎಂ.ಎಂ.ಎಸ್ ಹಾಗೂ ಸರ್ಕಾರಿ, ಅನುದಾನಿತ, ಅನುದಾನರಹಿತ, ಮೊರಾರ್ಜಿ, ವಸತಿಶಾಲೆಗಳ ಸಿ.ಬಿ.ಎಸ್.ಸಿ ಹಾಗೂ ಐ.ಸಿ.ಎಸ್.ಇ ಶಾಲೆಗಳಲ್ಲಿ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗಾಗಿ ಎನ್.ಟಿ.ಎಸ್.ಇ ಪರೀಕ್ಷೆಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ನವೆಂಬರ್ 3 ರಂದು ಪರೀಕ್ಷೆ ನಡೆಯಲಿದ್ದು, ವೆಬ್‍ಸೈಟ್ ವಿಳಾಸ- http://kseeb.kar.nic.in ರಲ್ಲಿ ಅರ್ಜಿಯನ್ನು ಸೆಪ್ಟೆಂಬರ್ 25 ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ವಿದ್ಯಾರ್ಥಿಗಳು ಹಾಗೂ ಪೋಷಕರು ಶಾಲೆಗಳ ಮುಖ್ಯಸ್ಥರನ್ನು ಸಂಪರ್ಕಿಸಬಹುದು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಮಂಗಳೂರು ಉತ್ತರ ವಲಯ ಇವರ ಪ್ರಕಟಣೆ ತಿಳಿಸಿದೆ.

Also Read  ಉಡುಪಿ: ಸಾರ್ವಜನಿಕ ಸ್ಥಳದಲ್ಲೇ ಗಾಂಜಾ ಸೇವನೆ..!   ➤ ಐವರು ವಿದ್ಯಾರ್ಥಿಗಳು ಅರೆಸ್ಟ್

error: Content is protected !!