ಹಳೆಯ ಕಡತ ಪೇಪರ್‍ಗಳ ಬಹಿರಂಗ ಹರಾಜು

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.24.ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಕಚೇರಿಯ ರೆಕಾರ್ಡ್ ಕೊಠಡಿಗೆ ಸಂಬಂಧಿಸಿದ ಹಳೆಯ ಕಡತಗಳಲ್ಲಿರುವ ಎಲ್ಲಾ ವಿಧದ ಪೇಪರ್ ಗಳನ್ನು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಕಚೇರಿಯ ಆವರಣದಲ್ಲಿ ಅಕ್ಟೋಬರ್ 4 ರಂದು ಬೆಳಿಗ್ಗೆ 11 ಗಂಟೆಗೆ ಬಹಿರಂಗ ಹರಾಜು ಮೂಲಕ ವಿಲೇವಾರಿ ಮಾಡಲಾವುದು.


ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಪೊಲೀಸ್ ಕಚೇರಿ, ದ.ಕ ಜಿಲ್ಲೆ ಮಂಗಳೂರು ಇವರನ್ನು ಸಂಪರ್ಕಿಸಲು ಪೊಲೀಸ್ ಅಧೀಕ್ಷಕರು ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

Scroll to Top