ಬಾಲಭವನ ಸಂಸ್ಥೆಯ ವತಿಯಿಂದ ಕಲಾಶ್ರೀ ಆಯ್ಕೆ ಶಿಬಿರಕ್ಕೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.24.ಬಾಲಭವನ ಸಂಸ್ಥೆಯು 2019 ನೇ ಸಾಲಿನ ತಾಲೂಕು ಮಟ್ಟದ ಮಕ್ಕಳ ಕಲಾ ಉತ್ಸವ ಹಾಗೂ ಕಲಾಶ್ರೀ ಪ್ರಶಸ್ತಿ ಶಿಬಿರ ಹಮ್ಮಿಕೊಳ್ಳಲಾಗಿದೆ.

ಈ ಶಿಬಿರದಲ್ಲಿ ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರುತಿಸಿ ಕಲಾ ಪ್ರತಿಭೆಯನ್ನು ಪ್ರೇರೇಪಿಸುವ ನಿಟ್ಟಿನಲ್ಲಿ ಪ್ರತಿಭಾವಂತ ಮಕ್ಕಳನ್ನು ಆರಿಸಿ ಕಲಾಶ್ರೀ ಪ್ರಶಸ್ತಿ ಪ್ರಧಾನ ಮಾಡುವ ಉದ್ದೇಶದಿಂದ ಒಕ್ಟೋಬರ್ 15 ರಂದು ಮಂಗಳಜ್ಯೋತಿ ಸಮಗ್ರ ಶಾಲೆ, ವಾಮಂಜೂರು ಇಲ್ಲಿ ನಡೆಯುವ ತಾಲೂಕು ಮಟ್ಟದ ಸ್ಪರ್ಧೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.


ಸ್ಪರ್ಧೆಗಳ ವಿವರ ಇಂತಿವೆ : ಸೃಜನಾತ್ಮಕ ಕಲೆ- ಚಿತ್ರಕಲೆ, ಕರಕುಶಲ, ಜೇಡಿಮಣ್ಣಿನ ಕಲೆ (ಮೂರರಲ್ಲೂ ಕಡ್ಡಾಯವಾಗಿ ಭಾಗವಹಿಸಬೇಕು), ಸೃಜನಾತ್ಮಕ ಬರವಣಿಗೆ-ಕಥೆ, ಕವನ, ಪ್ರಬಂಧ ಬರೆಯುವುದು (ಮೂರರಲ್ಲೂ ಕಡ್ಡಾಯವಾಗಿ ಭಾಗವಹಿಸಬೇಕು), ಸೃಜನಾತ್ಮಕ ಪ್ರದರ್ಶನ ಕಲೆ- ಶಾಸ್ತ್ರೀಯ ನೃತ್ಯ, ಜಾನಪದ ನೃತ್ಯ, ಕರ್ನಾಟಕ ಹಾಗೂ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ, ವಾದ್ಯ ಸಂಗೀತ, ಯಕ್ಷಗಾನ, ಯಕ್ಷಿಣಿ ಪ್ರದರ್ಶನ, ಸುಗಮ ಸಂಗೀತ, ಏಕಪಾತ್ರಾಭಿನಯ, ಯೋಗ ನೃತ್ಯ, ಮ್ಯಾಜಿಕ್ (ಯಾವುದಾದರೊಂದು ಕಲೆಯನ್ನು ಪ್ರದರ್ಶಿಸಲು ಅವಕಾಶವಿದೆ), ವಿದಾನದಲ್ಲಿ ನೂತನ ಆವಿಷ್ಕಾರ- ವಿಜ್ಞಾನಕ್ಕೆ ಸಂಬಂಧಪಟ್ಟಂತೆ ಒಂದು ವಿಷಯದ ಬಗ್ಗೆ ಮಾದರಿ ಪ್ರದರ್ಶನ ಹಾಗೂ ವಿವರಣೆ ಮತ್ತು ವಿಜ್ಷಾನ ಕ್ಷೇತ್ರಕ್ಕೆ ಸಂಬಂಧಿಸಿದಂತೆ ತೀರ್ಪುಗಾರರ ಇನ್ನಿತರ ಪ್ರಶ್ನೆಗಳಿಗೆ ಉತ್ತರ.

Also Read  ಜನಸಂಖ್ಯೆ ನಿಯಂತ್ರಣಕ್ಕಾಗಿ 2ಕ್ಕಿಂತ ಹೆಚ್ಚು ಮಕ್ಕಳಿದ್ದರೆ ► ಸಿಗೋದಿಲ್ಲ ಈ ಎಲ್ಲಾ ಸೌಲಭ್ಯ

ಅರ್ಜಿ ಸಲ್ಲಿಸಲು ಕೊನೆಯ ದಿನ ಅಕ್ಟೋಬರ್ 11. 9 ವರ್ಷದಿಂದ 16 ವರ್ಷದೊಳಗಿನ ಮಕ್ಕಳು ಸ್ಪರ್ಧೆಯಲ್ಲಿ ಭಾಗವಹಿಸಲು ಅರ್ಹರಿರುತ್ತಾರೆ. ಈಗಾಗಲೇ ಕಲಾಶ್ರೀ ಪ್ರಶಸ್ತಿ ಪಡಕೊಂಡವರು ಸ್ಪರ್ಧೆಯಲ್ಲಿ ಭಾಗವಹಿಸುವಂತಿಲ್ಲ. ರಾಜ್ಯ ಮಟ್ಟದ ಶಿಬಿರದಲ್ಲಿ ಒಂದು ಬಾರಿ ಭಾಗವಹಿಸಿ ಎರಡನೇ ಬಾರಿ ಭಾಗವಹಿಸಲು ಎರಡು ವರ್ಷಗಳ ಅಂತರ ಅಥವಾ ಭಾಗವಹಿಸಿದ ಕ್ಷೇತ್ರವನ್ನು ಬಿಟ್ಟು ಇತರ ಕ್ಷೇತ್ರದಲ್ಲಿ ಆಯ್ಕೆಯಾದಲ್ಲಿ ಮಾತ್ರ ಭಾಗವಹಿಸಬಹುದು. ಒಂದು ಮಗುವಿಗೆ ಎರಡು ಅವಕಾಶ ಮಾತ್ರ ಕಲ್ಪಿಸಿದೆ. ಮಂಗಳೂರು ಗ್ರಾಮಾಂತರ ವ್ಯಾಪ್ತಿಗೆ ಒಳಪಟ್ಟ ಮಕ್ಕಳು ಮಾತ್ರ ಚಟುವಟಿಕೆಯಲ್ಲಿ ಭಾಗವಹಿಸಲು ಅವಕಾಶವಿದೆ ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

Also Read  ಕಡಬ: ಹಾಡಹಗಲೇ ನಗದು, ಚಿನ್ನಾಭರಣ ದೋಚಿದ ಆರೋಪಿ ಅರೆಸ್ಟ್

error: Content is protected !!
Scroll to Top