ಆಯುಷ್ಮಾನ್ ಭಾರತ್ ➤ ಜಾಥಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.24.ಆಯುಷ್ಮಾನ್ ಭಾರತ್- ಆರೋಗ್ಯ ಕರ್ನಾಟಕ ಯೋಜನೆ ಜಾರಿಗೆ ಬಂದು ಒಂದು ವರ್ಷ ಪೂರ್ಣಗೊಂಡ ಹಿನ್ನಲೆಯಲ್ಲಿ ಸಾರ್ವಜನಿಕರಿಗೆ ಯೋಜನೆಯ ಅರಿವು ಮೂಡಿಸಲು ಹಾಗೂ ಫಲಾನುಭವಿಗಳು ಈ ಯೋಜನೆಯ ಸೌಲಭ್ಯವನ್ನು ಪಡೆದುಕೊಳ್ಳಲು ಜಾಗೃತಿ ಜಾಥ ಕಾರ್ಯಕ್ರಮ ನಡೆಯಿತು.


ಸೋಮವಾರ ಬೆಳಿಗ್ಗೆ 9.30 ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಜಾಥ ಆರಂಭಗೊಂಡಿದ್ದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧು ಬಿ ರೂಪೇಶ್ ಹಸಿರು ನಿಶಾನೆ ತೋರಿ ಚಾಲನೆ ನೀಡಿದರು.
ಬಳಿಕ ಜಾಥವು ಜಿಲ್ಲಾ ವೆನ್‍ಲಾಕ್ ಆಸ್ಪತ್ರೆ ಮಂಗಳೂರು ಇಲ್ಲಿಗೆ ಸಾಗಿತು. ಈ ಸಂಧರ್ಭದಲ್ಲಿ ಮಂಗಳೂರು ದಕ್ಷಿಣ ಶಾಸಕ ಡಿ. ವೇದವ್ಯಾಸ ಕಾಮತ್, ಮಂಗಳೂರು ಶಾಸಕ ಯು.ಟಿ ಖಾದರ್, ಜಿಲ್ಲಾ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಆರ್ ಸೆಲ್ವಮಣಿ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಕಸ್ತೂರಿ ಪಂಜ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಾಮಕೃಷ್ಣ ರಾವ್, ತಾಲೂಕು ಪಂಚಾಯತ್ ಅಧ್ಯಕ ಮಹಮ್ಮದ್ ಮೊನು, ಇನ್ನಿತರರು ಉಪಸ್ಥಿತರಿದ್ದರು.

Also Read  ಏ.20 ರಂದು 'ರಾಜನೋಟ' ಕೃತಿ ಬಿಡುಗಡೆ

Gems

error: Content is protected !!
Scroll to Top