ತಿರುವೈಲ್ ➤ ವಾರ್ಡ್ ಮಟ್ಟದ ಸಾರ್ವಜನಿಕ ಸಮಾಲೋಚನಾ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.26.ಕರ್ನಾಟಕ ಸರ್ಕಾರವು ಎಡಿಬಿ ನೆರವಿನೊಂದಿಗೆ ಮಂಗಳೂರು ನಗರಕ್ಕೆ ಕ್ವಿಮಿಪ್ ಟ್ರಾಂಚ್-2 ರಡಿಯಲ್ಲಿ ಒಳಚರಂಡಿ ಹಾಗೂ ನಿರಂತರ ನೀರು ಸರಬರಾಜು ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ.


ಈ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಲು ಇಂದು ಸಂಜೆ 4 ಗಂಟೆಗೆ ವಾರ್ಡ್ ನಂ.20 ರಲ್ಲಿ ವಾರ್ಡ್ ಮಟ್ಟದ ಸಾರ್ವಜನಿಕ ಸಮಾಲೋಚನಾ ಸಭೆಯನ್ನು ತಿರುವೈಲ್ ವಾರ್ಡ್‍ನ ಅಮೃತ್‍ನಗರ ಸರ್ಕಾರಿ ಶಾಲೆ ಹತ್ತಿರ ಕೆಯುಐಡಿಎಫ್‍ಸಿ ಹಾಗೂ ಮಂಗಳೂರು ಮಹಾನಗರ ಪಾಲಿಕೆ ಸಹಯೋಗದಿಂದ ಆಯೋಜಿಸಲಾಗಿದೆ. ಈ ಸಭೆಗೆ ವಾರ್ಡ್‍ನ ಮುಖಂಡರು, ಸಂಘ ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಆಗಮಿಸಿ ಕಾಮಗಾರಿಗಳ ಸಮರ್ಪಕ ನಿರ್ವಹಣೆಗೆ ತಮ್ಮ ಸಲಹೆ ಮತ್ತು ಸೂಚನೆಗಳನ್ನು ನೀಡಬೇಕು ಎಂದು ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರ ಪ್ರಕಟಣೆ ತಿಳಿಸಿದೆ.

Also Read  ಕಡಬ ಠಾಣೆಯ ಸ್ವಾಧೀನದಲ್ಲಿರುವ ವಿವಿಧ ವಾಹನಗಳ ಮಾಲಕರಿಗೆ ಸೂಚನೆ ► ವಾರದೊಳಗೆ ವಾಹನಗಳನ್ನು ಬಿಡಿಸದಿದ್ದಲ್ಲಿ ಬಹಿರಂಗ ಹರಾಜಿಗೆ ಚಾಲನೆ

error: Content is protected !!
Scroll to Top