ಅ. 2 ಗಾಂಧಿಜಯಂತಿ ದಿನಾಚರಣೆ ➤ ಮಕ್ಕಳಿಗೆ ವಿವಿಧ ಸ್ಪರ್ಧೆ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.26.ಗಾಂಧಿಜಯಂತಿ ದಿನಾಚರಣೆ ಪ್ರಯುಕ್ತ ಮಕ್ಕಳಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ. ಅಕ್ಟೋಬರ್ 2 ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಬಾಲಭವನ ಕದ್ರಿಯಲ್ಲ್ಲಿ ನಡೆಯುವ ಗಾಂಧಿ ಜಯಂತಿ ದಿನಾಚರಣೆ ಕಾರ್ಯಕ್ರಮದಲ್ಲಿ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ.

(5 ವರ್ಷದ ದಿಂದ 8 ವರ್ಷದ ಮಕ್ಕಳು, 9 ವರ್ಷದಿಂದ 12 ವರ್ಷದ ಮಕ್ಕಳು, ಹಾಗೂ 13 ವರ್ಷದಿಂದ 16 ವರ್ಷದ ಮಕ್ಕಳಿಗೆ) ಚಿತ್ರಕಲೆ ಸ್ಪರ್ಧೆ ಹಾಗೂ ಪ್ರಬಂಧ ಸ್ಪರ್ಧೆಯನ್ನು (10 ವರ್ಷದಿಂದ 12 ವರ್ಷದ ಮಕ್ಕಳು, ಹಾಗೂ 13 ವರ್ಷದಿಂದ 16 ವರ್ಷದ ಮಕ್ಕಳಿಗೆ) ಏರ್ಪಡಿಸಲಾಗಿದ್ದು, ಆಸಕ್ತಿಯುಳ್ಳ ಮಕ್ಕಳು ಸ್ಪರ್ಧೆಯಲ್ಲಿ ಭಾಗವಹಿಸಬಹುದು. ಒಬ್ಬ ವಿದ್ಯಾರ್ಥಿಗೆ ಒಂದು ಸ್ಪರ್ಧೆಯಲ್ಲಿ ಮಾತ್ರ ಭಾಗವಹಿಸಲು ಅವಕಾಶವಿರುತ್ತದೆ.

Also Read  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಒಕ್ಕೂಟದ ನೂತನ ಪದಾಧಿಕಾರಿಗಳ ಪದಗ್ರಹಣ►ಗ್ರಾಮಾಭಿವೃದ್ಧಿ ಯೋಜನೆ ಸ್ವಾವಲಂಬಿ ಬದುಕಿಗೆ ಪ್ರೇರಣೆ - ಬಾಲಕೃಷ್ಣ ಬಳ್ಳೇರಿ


ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಪಂಚಾಯತ್ ಕಟ್ಟಡ, ಉರ್ವಸ್ಟೋರ್, ಮಂಗಳೂರು-575006 ದೂರವಾಣಿ ಸಂಖ್ಯೆ: 0824-2451254 ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರ ಪ್ರಕಟಣೆ ತಿಳಿಸಿದೆ.

error: Content is protected !!
Scroll to Top