➤➤ Big Breaking News ಸುಳ್ಯ: ಸ್ವಿಫ್ಟ್ ಕಾರು – ಲಾರಿ ನಡುವೆ ಮುಖಾಮುಖಿ ಢಿಕ್ಕಿ ➤ ನಾಲ್ವರು ಸ್ಥಳದಲ್ಲೇ ಮೃತ್ಯು



(ನ್ಯೂಸ್ ಕಡಬ) newskadaba.com ಸುಳ್ಯ, ಅ.01. ಕಾರು ಮತ್ತು ಲಾರಿ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಮಂಗಳವಾರದಂದು ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿಯ ಸುಳ್ಯದಲ್ಲಿ ನಡೆದಿದೆ.





ಮಾರುತಿ ಸುಝುಕಿ ಸ್ವಿಫ್ಟ್ ಕಾರು ಹಾಗೂ ಈಚರ್ ಲಾರಿ ನಡುವೆ ಸುಳ್ಯ ಸಮೀಪದ ಅಡ್ಕಾರ್ ಎಂಬಲ್ಲಿ ಮುಖಾಮುಖಿ ಢಿಕ್ಕಿಯಾಗಿ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಮಡಿಕೇರಿ ಮೂಲದವರೆಂದು ಹೇಳಲಾಗುತ್ತಿದ್ದು, ಮೃತರ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ. ಸ್ಥಳಕ್ಕೆ ಸುಳ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.






error: Content is protected !!
Scroll to Top