ಅಲೆಮಾರಿ/ಅರೆಅಲೆಮಾರಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು,ಅಕ್ಟೋಬರ್.4.              

ಮೆಟ್ರಿಕ್-ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ/ಅರೆಅಲೆಮಾರಿ ವಿದ್ಯಾರ್ಥಿಗಳಿಂದ, 2019-20ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ಮೆಟ್ರಿಕ್-ನಂತರದ ವಿದ್ಯಾರ್ಥಿ ವೇತನ ಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಹಾಗೂ ಶುಲ್ಕ ವಿನಾಯಿತಿ, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ, ಮತ್ತು ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯವೇತನ ಸೌಲಭ್ಯಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ಅಕ್ಟೋಬರ್ 31.ಹೆಚ್ಚಿನ ಮಾಹಿತಿಗಾಗಿ ವೆಬ್‍ಸೈಟ್ www.backwardclasses.kar.nic.in ನ್ನು ಸಂಪರ್ಕಿಸಬೇಕು ಎಂದು ತಾಲೂಕು ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ,ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

Also Read  ಅಕ್ರಮ ಮರ ಸಾಗಾಟ- ಟಿಪ್ಪರ್ ಚಾಲಕ ವಶಕ್ಕೆ

Gems

error: Content is protected !!
Scroll to Top